ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಾವೇರಿ: 28ರಂದು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ವಿಚಾರ ಸಂಕಿರಣ

Mainashree
Updated On : 26 Jan 2014, 11:52 am

ಹಾವೇರಿ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಇಲಾಖೆ ಹಾಗೂ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯ ಎನ್ನೆಸ್ಸೆಸ್, ಎನ್‌ಸಿಸಿ, ರೆಡ್‌ಕ್ರಾಸ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಆಶ್ರಯದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿಚಾರ ಸಂಕಿರಣ ಜ. 28ರಂದು ಬೆಳಗ್ಗೆ 10.30ಕ್ಕೆ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಸಭಾಭವನದಲ್ಲಿ ಜರುಗಲಿದೆ. ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಉದ್ಘಾಟಿಸಲಿದ್ದು, ಗುದ್ಲೆಪ್ಪ ಹಳ್ಳಿಕೇರಿ ಕಾಲೇಜಿನ ಪ್ರಾಚಾರ್ಯ ಡಾ೤ ಬಿ.ಸಿ. ಬನ್ನೂರ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ೤ ಎಚ್.ಎಸ್. ರಾಘವೇಂದ್ರಸ್ವಾಮಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಡ್ಲಿ ಪಾಲ್ಗೊಳ್ಳುವರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ೤ ಡಿ.ಬಿ. ಮೂಲಿಮನಿ ಉಪನ್ಯಾಸ ನೀಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement