ಹಾವೇರಿ

ಬೆಳೆವಿಮೆ ಸರ್ಕಾರವೇ ಭರಿಸಲಿ

ಶಿಗ್ಗಾಂವಿ: ಸರ್ಕಾರ ತಕ್ಷಣ ಬತ್ತ ಸೇರಿದಂತೆ ಮುಂಗಾರು ಬಿತ್ತನೆ ಮಾಡಿದ ರೈತರಿಗೆ ಸಹಕಾರಿ ಬ್ಯಾಂಕ್‌ಗಳ ಮೂಲಕ ಸಾಲದ ವ್ಯವಸ್ಥೆ ಕಲ್ಪಿಸುವ ಜತೆಗೆ ಪ್ರಸಕ್ತ ವರ್ಷದ ಮುಂಗಾರಿನ ಬೆಳೆವಿಮೆ ಹಣ ಭರಿಸುವ ನಿರ್ಧಾರ ಪ್ರಕಟಿಸಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ತಾಲೂಕಿನ ಹೊಸೂರು-ಯತ್ತಿನಹಳ್ಳಿ ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಹಾಗೂ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನ ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಬತ್ತ ಬೆಳೆಯಲಾಗುತ್ತದೆ. ಮಳೆಯಾಶ್ರಿತ ಬತ್ತದ ಬೆಳೆ ಪ್ರಸಕ್ತವರ್ಷ ಮಳೆಯಿಲ್ಲದೆ ಹುಟ್ಟಿ ಚಿಗುರಿರುವಾಗಲೆ ಒಣಗುವ ಹಂತ ತಲುಪಿದೆ. ಮುಂದೆ ಮಳೆಯಾದರೂ ಬೆಳೆ ಚೇತರಿಸಿಕೊಳ್ಳುವ ಸ್ಥಿತಿಯಲ್ಲಿಲ್ಲ. ಹೀಗಿರುವಾಗ ಬತ್ತ ಬೆಳೆಯುವ ಕನಸು ಹೊತ್ತ ರೈತ ಅನಿವಾರ್ಯವಾಗಿ ಬಿತ್ತನೆ ಮಾಡಿರುವ ನಷ್ಟದೊಂದಿಗೆ ಪರ್ಯಾಯ ಬೆಳೆ ಬೆಳೆಯುವ ಸ್ಥಿತಿ ನಿರ್ಮಾಣವಾಗಿದೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಶೀಘ್ರ ನಷ್ಟಕ್ಕೊಳಗಾದ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಅಲ್ಲದೆ, ಬೆಳೆ ವಿಮೆಯನ್ನು ಸರ್ಕಾರದಿಂದಲೇ ಭರಿಸಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಒತ್ತಾಯಿಸಿದರು.
ತಡಸ ಕ್ರಾಸ್‌ನಿಂದ ಹಾನಗಲ್ ಮೂಲಕ ಶಿವಮೊಗ್ಗದತ್ತ ಸಾಗುವ ರಾಜ್ಯ ಹೆದ್ದಾರಿಯನ್ನು ಹಿಂದಿನ ಸರ್ಕಾರ ರಾಷ್ಟ್ರೀಯ ಹೆದ್ದಾರಿನ್ನಾಗಿ ಮೇಲ್ದರ್ಜೆಗೇರಿಸಿ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿತ್ತು. ಅದು ತಾಂತ್ರಿಕ ಕಾರಣದಿಂದ ವಿಳಂಬವಾಗಿತ್ತು. ಈಗ ಎಲ್ಲ ಸಮಸ್ಯೆಗಳು ಪರಿಹಾರಗೊಂಡು ಮಳೆಗಾಲ ಮುಗಿದ ನಂತರ ಕಾಮಗಾರಿ ಪ್ರಾರಂಭಗೊಳ್ಳಲಿದೆ ಎಂದ ಶಾಸಕರು, ಹೆದ್ದಾರಿ ನಿರ್ಮಾಣದಿಂದ ಈ ಭಾಗದ ಜನರ ನಿತ್ಯದ ಸಾರಿಗೆ ತೊಂದರೆ ನಿವಾರಣೆಯಾಗುವುದರ ಜತೆಗೆ ಹೆದ್ದಾರಿ ಪಕ್ಕದ ಜಮೀನುಗಳಿಗೆ ಉತ್ತಮ ಬೆಲೆ ಬರುತ್ತದೆ ಎಂದರು.
ವಿಪ ಸದಸ್ಯ ಸೋಮಣ್ಣ ಬೇವಿನಮರದ ಮಾತನಾಡಿದರು. ಗ್ರಾಪಂ ಅಧ್ಯಕ್ಷ ಚನ್ನಪ್ಪ ಬಿಂದಲಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯರಾದ ಬಿ.ಟಿ. ಇನಾಮತಿ, ಸಿ.ಎಸ್. ಪಾಟೀಲ, ಸರೋಜಾ ಆಡಿನ, ತಾಪಂ ಸದಸ್ಯರಾದ ಈಶ್ವರಗೌಡ ಪಾಟೀಲ, ಉಮಾ ಡವಗಿ, ಗ್ರಾಪಂ ಉಪಾಧ್ಯಕ್ಷ ಎಸ್.ಆರ್. ಅದರಗುಂಚಿ, ತಾಪಂ ಇಒ ಸುರೇಶ ಕುಂದೂರು, ಬಿಇಒ ಎಂ.ಎಚ್. ಪಾಟೀಲ, ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಬಸವರಾಜ ಬರದೂರ, ಗಂಗವ್ವ ಲಮಾಣಿ, ಶಿವಪ್ಪ ಸೂರಗೊಂಡ, ಜಹೀರಾಬಾನು ಬೆಳಗಲಿ, ಗಂಗವ್ವ ಧಾರವಾಡ, ಶಾರದಾ ಬಾರಕೇರ, ಹರ್ಜಪ್ಪ ಲಮಾಣಿ, ಉಳವನಗೌಡ್ರ ಪಾಟೀಲ, ಅನಂತಪ್ಪ ಛಬ್ಬಿ ಇತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!