ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Lingaraj Badiger
Updated On : 17 Jul 2014, 10:54 am

ರಾಣಿಬೆನ್ನೂರು: ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಇಲ್ಲಿನ ಮಹಿಳಾ ಹೊಲಿಗೆ ತರಬೇತಿ ಕೇಂದ್ರಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿ ಪಡೆಯಲು ಹಿಂದುಳಿದ ವರ್ಗದ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅ. 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 18ರಿಂದ 35 ವರ್ಷದ ವಯೋವುತಿಯೋಳಗಿನವರಿರಬೇಕು. ಕನಿಷ್ಠ 7ನೇ ತರಗತಿ ಉತ್ತೀರ್ಣರಾಗಿರಬೇಕು. ವರ್ಷದ ತರಬೇತಿ ಮುಗಿದ ನಂತರ ಇಲಾಖೆ ನಡೆಸುವ ವಾರ್ಷಿಕ ಪರೀಕ್ಷೆಯಲ್ಲಿ ಪಾಸಾದವರಿಗೆ ಉಚಿತವಾಗಿ ಹೊಲಿಗೆ ಯಂತ್ರ ನೀಡಲಾಗುವುದು. ವಿಧವೆಯರು, ನಿರಾಶ್ರಿತ ಮಹಿಳೆಯರು ಮತ್ತು ಅಂಗವಿಕಲರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ರಾಮಚಂದ್ರಗೌಡ ಫಕ್ಕೀರಗೌಡ ಪಾಟೀಲ ನಿಧನ
ರಾಣಿಬೆನ್ನೂರು: ತಾಲೂಕಿನ ಮುಷ್ಠೂರು ಗ್ರಾಮದ ರಾಮಚಂದ್ರಗೌಡ ಫಕ್ಕಿರಗೌಡ ಪಾಟೀಲ (46) ಇವರು ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಹಾಗೂ ಬಂಧು-ಬಳಗ ಹೊಂದಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸ್ವ-ಗ್ರಾಮದಲ್ಲಿ ನೆರವೇರಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement