ಅತ್ಯಾಚಾರ ಯತ್ನ: ಆರೋಪಿ ವಶಕ್ಕೆ
ಗುತ್ತಲ: ಹಾವೇರಿ ತಾಲೂಕಿನ ಗುತ್ತಲದಲ್ಲಿ ಮಂಗಳವಾರ ಮಧ್ಯಾಹ್ನ ಶಾಲೆಯಿಂದ ವಾಪಸಾಗುತ್ತಿದ್ದ 5ನೇ ತರಗತಿ ವಿದ್ಯಾರ್ಥಿನಿಯನ್ನು ಮನೆಗೆ ಕರೆದೊಯ್ದ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಇದೀಗ ಪೊಲೀಸ್ ವಶದಲ್ಲಿದ್ದಾನೆ. ಗುತ್ತಲ ನಿವಾಸಿ ಗುರುಶಾಂತಯ್ಯ ಓದಿಸೋಮಠ ಬಂಧಿತ ಆರೋಪಿ. ಶಾಲೆಯಿಂದ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಬಾಲಕಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದಾಳೆ. ಬಾಲಕಿ ಹೆದರಿಕೊಂಡು ಮನೆಗೆ ಓಡಿಬಂದಿದ್ದಾಳೆ. ಪಾಲಕರು ವಿಚಾರಿಸಿದಾಗ ವಿಷಯ ಬೆಳಕಿಗೆ ಬಂದಿದೆ. ನಂತರ ಗ್ರಾಮಸ್ಥರ ಜತೆ ಬಂದ ಪೊಲೀಸರು ಗುರುಶಾಂತಯ್ಯಗೆ ಏಟು ನೀಡಿ, ಪೊಲೀಸರಿಗೆ ಒಪ್ಪಿಸಿದ್ದಾರೆ.