8ರಂದು ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ
ಶಿಗ್ಗಾಂವಿ: ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಶಿಗ್ಗಾಂವಿ ಡಾ. ಬಿ.ಆರ್. ಅಂಬೇಡ್ಕರ್, ಜನಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಮಾ. 8ರಂದು ಬೆಳಗ್ಗೆ 11 ಗಂಟೆಗೆ ತಾಲೂಕಿನ ಮಾಕಾಪುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಹಾಗೂ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ವಿಚಾರ ಸಂಕಿರಣ ನಡೆಯಲಿದೆ. ಸಂಜೆ ಡಾ. ರಾಜಗುರು ಮೆಲೋಡಿ ಇವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಸಂಸದ ಮಂಜುನಾಥ ಕುನ್ನೂರ ನೆರವೇರಿಸುವರು. ಅಧ್ಯಕ್ಷತೆಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ತಾವರಗಿ, ಮಾಜಿ ಶಾಸಕ ಸೈಯದ್ ಅಜೀಂಫೀರ ಖಾದ್ರಿ ವಹಿಸುವರು. ಅತಿಥಿಗಳಾಗಿ ಧಾರವಾಡ ಜಿಲ್ಲಾ ಶಸ್ತ್ರ ವೈದ್ಯರಾದ ಡಾ. ವಿ.ಡಿ. ಕರ್ಪೂರಮಠ, ಬ್ಲಡ್ ಬ್ಯಾಂಕ್ ಅಧಿಕಾರಿ ಡಾ. ಎ.ಕೆ. ಚಂದ್ರಶೇಖರ, ಧಾರವಾಡ ಶಿಕ್ಷಣ ಇಲಾಖೆ ಉಪನಿರ್ದೇಶ ಡಾ. ಬಿ.ಕೆ. ವರ್ಧನ್ ಆಗಮಿಸುವರು. ವಿಚಾರ ಮಂಡನೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಮುಖ್ಯಸ್ಥ ಡಾ. ಸುರೇಶ ಹುಲ್ಲಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಶ್ಯಾಡಂಬಿಯ ಎಂ.ಸಿ. ಪಾಟೀಲ, ಜಲಾನಯನ ಇಲಾಖೆಯ ಸಹ ನಿರ್ದೇಶಕ ವೆಂಕಟರಮಣಪ್ಪ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಾಲಚಂದ್ರ ದೊಡ್ಡಮನಿ ಸೇರಿದಂತೆ ತಾಲೂಕಿನ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.