ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಿ: ಪ್ರತಿಭಟನೆ

Rashmi Kasaragodu
Updated On : 8 Mar 2014, 12:26 pm

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಮಾ. 7
ಸಮುದಾಯದ ಮೀಸಲು ಸೀಟುಗಳನ್ನು ಮಾರಿಕೊಂಡಿರುವ ಭಾಷಾ ಅಲ್ಪಸಂಖ್ಯಾತ ಕಾಲೇಜುಗಳ ಆಡಳಿತ ಮಂಡಳಿಯ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿ ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿಪತ್ರಸಲ್ಲಿಸಿದರು.
ನಗರದ ಬಸ್ ನಿಲ್ದಾಣದ ಎದುರು ಸೇರಿದ್ದ ಎಬಿವಿಪಿ ಕಾರ್ಯಕರ್ತರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಬಸ್ ನಿಲ್ದಾಣದ ರಸ್ತೆ, ಮೇಡ್ಲೆರಿ ಸರ್ಕಲ್, ಸ್ಟೇಶನ್ ರಸ್ತೆ ಮೂಲಕ ಸಾಗಿ ಪೋಸ್ಟ್ ಸರ್ಕಲ್ನಲ್ಲಿ ಬಹಿರಂಗ ಸಭೆ ನಡೆಸಿ ಮೀಸಲು ಸೀಟುಗಳನ್ನು ಮಾರಿಕೊಂಡಿರುವ ವಿವಿಧ ಕಾಲೇಜುಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಬಿವಿಪಿ ತಾಲೂಕು ಮುಖಂಡ ರಾಜು ಅರಶಿಕೇರಿ ಮಾತನಾಡಿ, ಸರ್ಕಾರ ಭಾಷಾ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡಿದ್ದ ಮೀಸಲು ಸೀಟುಗಳನ್ನು ಮಾರಿಕೊಂಡಿರುವ, ಕಾಲೇಜುಗಳ ಆಡಳಿತ ಮಂಡಳಿಯವರ ಒತ್ತಡಕ್ಕೆ ಮಣಿದಿರುವ ಸರ್ಕಾರ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯವರನ್ನು ಕಡ್ಡಾಯ ರಜೆ ಮೇಲೆ ಕಳಿಸಿರುವುದು ಖಂಡನೀಯವಾಗಿದ್ದು, ಕೂಡಲೇ ಸರ್ಕಾರ ಅವರನ್ನು ವಾಪಸ್ ಕರೆಯಿಸಿಕೊಳ್ಳಬೇಕು. ಮೀಸಲು ಸೀಟುಗಳನ್ನು ದುರುಪಯೋಗಪಡಿಸಿಕೊಂಡಿರುವ ಕಾಲೇಜು ಆಡಳಿತ ಮಂಡಳಿಯವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಗರಣವನ್ನು ಸಿಓಡಿ ತನಿಖೆಗೆ ಒಪ್ಪಿಸಬೇಕು. ಸೀಟು ಹಂಚಿಕೆಯಲ್ಲಿ ಭಾಗಿಯಾಗಿರುವ ಕಾಲೇಜುಗಳ ಮಾನ್ಯತೆಯನ್ನು ರದ್ದುಪಡಿಸಬೇಕು. ಸೀಟುಗಳನ್ನು ದುರುಪಯೋಗ ಪಡಿಸಿಕೊಂಡಿರುವ ಕಾಲೇಜಿನಿಂದ ಪ್ರತಿ ಸೀಟಿನ ಮೌಲ್ಯದ ಹತ್ತುಪಟ್ಟು ಹಣವನ್ನು ಸರ್ಕಾರ ವಸೂಲಿ ಮಾಡಬೇಕು. ಈ ಎಲ್ಲಾ ಹಗರಣಗಳಲ್ಲಿ ಭಾಗಿಯಾಗಿರುವ ಭಾಷಾ ಅಲ್ಪ ಸಂಖ್ಯಾತ ಕಾಲೇಜುಗಳ ಕುರಿತು ಸಮಗ್ರ ಮಾಹಿತಿಯನ್ನು ರಾಷ್ಟ್ರೀಯ ಅಲ್ಪ ಸಂಖ್ಯಾತ ಶಿಕ್ಷಣ ಸಂಸ್ಥೆಗಳ ಆಯೋಗಕ್ಕೆ ನೀಡಬೇಕೆಂದು ಒತ್ತಾಯಿಸಿದರು.       
ಅನಿಲ, ವಿಕಾಸ, ಮಲ್ಲಿಕ ಬಿಕೆ, ವಿನೋದ ಜಿ, ಗುರುರಾಜ ಬಣಕಾರ, ಕೃಷ್ಣಾ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement