ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಾಂಗ್ರೆಸ್ ಯೋಜನೆ-ಸಾಧನೆ ಪಾದಯಾತ್ರೆ ಇಂದು

Lingaraj Badiger
Updated On : 11 Mar 2014, 12:00 pm

ಹಾನಗಲ್ಲ: ಕಾಂಗ್ರೆಸ್ ಪಕ್ಷದ ಯೋಜನೆ, ಸಾಧನೆಗಳನ್ನು ಮತದಾರರ ಮನೆ ಮನೆಗೆ ತಲುಪಿಸುವ ಭಾರತ ನಿರ್ಮಾಣ ಜನಜಾಗೃತಿ ಪಾದಯಾತ್ರೆ ಹಾನಗಲ್ಲ ತಾಲೂಕಿನಲ್ಲಿ ಮಾ. 11ರಂದು ಪ್ರಾರಂಭಗೊಳ್ಳಲಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲ ಹಾಗೂ ಸಿ.ಎಸ್. ಬಡಿಗೇರ ತಿಳಿಸಿದರು.
ಹಾನಗಲ್ಲಿನಲ್ಲಿ ಪಾದಯಾತ್ರೆ ಕಾರ್ಯಕ್ರಮದ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಅವರು, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಸೂಚನೆ ಮೇರೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕ ಮನೋಹರ ತಹಶೀಲ್ದಾರ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ನಗರದ ದರ್ಗಾ ಪ್ರದೇಶದಲ್ಲಿ ಶಾಸಕ ಮನೋಹರ ತಹಶೀಲ್ದಾರ ಜಾಗೃತಿ ಪಾದಯಾತ್ರೆಗೆ ಚಾಲನೆ ನೀಡುವರು. ನಂತರ ಗೆಜ್ಜಿಹಳ್ಳಿ, ಗಿರಿಶಿನಕೊಪ್ಪ, ಡೊಳ್ಳೇಶ್ವರ, ಗುರುರಾಯಪಟ್ಟಣ ಗ್ರಾಮಗಳ ಮಾರ್ಗವಾಗಿ ಪಾದಯಾತ್ರೆ ಅಕ್ಕಿಆಲೂರು ತಲುಪುವುದು. ಅಕ್ಕಿಆಲೂರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಕಲ್ಲಾಪುರ ವೃತ್ತದಲ್ಲಿ ಸಭೆ ನಡೆಸಿ ಮುಕ್ತಾಯಗೊಳ್ಳುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಿದ ಜನಪರ ಯೋಜನೆ, ಅಭಿವೃದ್ಧಿ ಕಾರ್ಯಗಳನ್ನು ಮತದಾರರಿಗೆ ವಿವರಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಲಾಗುವುದು.
ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಯ ಕಾಂಗ್ರೆಸ್ ಶಾಸಕರಾದ ಕೆ.ಬಿ. ಕೋಳಿವಾಡ, ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಬಿ.ಸಿ. ಪಾಟೀಲ, ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ, ಕೆಪಿಸಿಸಿ ಸದಸ್ಯರು, ಜಿಪಂ ಸದಸ್ಯರು, ತಾಪಂ ಸದಸ್ಯರು, ಡಿಸಿಸಿ ಸದಸ್ಯರು, ಎಪಿಎಂಸಿ ನಿರ್ದೇಶಕರು, ಪುರಸಭಾ ಸದಸ್ಯರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು. ಗ್ರಾಮ ಪಂಚಾಯಿತಿ ಸದಸ್ಯರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಬೂತ್ ಮಟ್ಟದ ಹಾಗೂ ಪಕ್ಷದ ಕಾರ್ಯಕರ್ತರು, ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯರಾದ ರಾಜಶೇಖರ ಸಾಲಿಮಠ, ಸತೀಶ ದೇಶಪಾಂಡೆ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎನ್.ಎಸ್. ಪಡೆಪ್ಪನವರ, ಸಂಚಾಲಕ ಆರ್.ಎಸ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಎಂ. ಪಠಾಣ, ವಿಷ್ಣುಕಾಂತ ಜಾಧವ, ಕೋಶಾಧ್ಯಕ್ಷ ವೀರೇಶ ಬೈಲವಾಳ, ಗಿರೀಶಗೌಡ ಪಾಟೀಲ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement