ಇಂದು ಮತದಾರರ ಜಾಗೃತಿಗೆ ಮಾನವ ಸರಪಳಿ
ಹಾವೇರಿ: ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ, ಹಾವೇರಿ ತಾಲೂಕು ಲೋಕ ಶಿಕ್ಷಣ ಸಮಿತಿ, ಹಾವೇರಿ ಹಾಗೂ ದೇವಗಿರಿ ಗ್ರಾಮ ಪಂಚಾಯಿತಿ ಲೋಕ ಶಿಕ್ಷಣ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಮತದಾರ ಜಾಗೃತಿ ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ದೇವಗಿರಿ ಗ್ರಾಮದಲ್ಲಿ ಮಾನವ ಸರಪಳಿ ಹಾಗೂ ಜಾಥಾ ಕಾರ್ಯಕ್ರಮವನ್ನು ಮಾ. 14ರಂದು ಸಂಜೆ 4 ಗಂಟೆಗೆ ಗ್ರಾಮ ಪಂಚಾಯಿತಿ ಎದುರುಗಡೆ ಆಯೋಜಿಸಲಾಗಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹ ಅಧಿಕಾರಿ ಕೆ.ಬಿ. ಅಂಜನಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜಿಲ್ಲಾ ವಾರ್ತಾಧಿಕಾರಿ ಜುಂಜಣ್ಣ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ, ಮಹಿಳಾ ಮಕ್ಕಳಾಭಿವೃದ್ಧಿ ಅಧಿಕಾರಿ ವಿಜಯಕುಮಾರ, ಅಕ್ಷರ ದಾಸೋಹ ಅಧಿಕಾರಿ ಎಸ್.ಎಸ್. ಅಡಿಗ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎ.ಟಿ. ಜಯಕುಮಾರ ಮುಂತಾದವರು ಉಪಸ್ಥಿತರಿರುವರು. ಸಾಕ್ಷರತಾ ಪ್ರೇರಕರು, ಸ್ವಯಂ-ಸೇವಕರು, ಸ್ತ್ರೀ-ಶಕ್ತಿ ಸಂಘಗಳ ಸದಸ್ಯರು, ಶಿಕ್ಷಕರು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆರು ಮಾನವ ಸರಪಳಿ ಹಾಗೂ ಜಾಥಾದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮ ಸಹಾಯಕ ಚಂದ್ರಕಾಂತ ಕುಸನೂರ, ಜಿಲ್ಲಾ ಸಂಯೋಜಕ ನಾರಾಯಣ ಕರೆವ್ವನವರ ಹಾಗೂ ತಾಲೂಕು ಸಂಯೋಜಕ ಬಿ.ಎಂ. ಅಂಗಡಿ, ಪಿಡಿಒ ಎಸ್.ಎಸ್. ಎರೇಸಿಮೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಎಂ.ಆರ್. ಶಂಕ್ರಪ್ಪನವರ ಕಾರ್ಯಕ್ರಮವನ್ನು ಸಂಘಟಿಸಲಿದ್ದಾರೆಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.