ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪ್ರತ್ಯೇಕ ಪ್ರಕರಣ: ಇಬ್ಬರು ಬಾಲಕಿಯರು ನಾಪತ್ತೆ

Lingaraj Badiger
Updated On : 15 Mar 2014, 12:28 pm

ಕನ್ನಡಪ್ರಭ ವಾರ್ತೆ, ಹಾವೇರಿ, ಮಾ. 14
ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ನಾಪತ್ತೆಯಾಗಿರುವ ಕುರಿತು ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಲೂಕಿನ ಕಾಟೇನಹಳ್ಳಿ ಗ್ರಾಮದ ಶ್ವೇತಾ ಗೋಪಾಲ ರೋಗಣ್ಣವರ ಎಂಬ (17) ವರ್ಷದ ಬಾಲಕಿ ಕಳೆದ ಫೆ. 28ರಂದು ಕಾಲೇಜಿಗೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಬಾರದೇ ಕಾಣೆಯಾಗಿದ್ದಾಳೆ ಎಂದು ಆಕೆಯ ಮಾವ ಹೊನ್ನಪ್ಪ ಎಲಿಗಾರ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ. ಅವಳು 4 ಎಡಿ 6 ಇಂಚ್ ಎತ್ತರವಿದ್ದು, ಕೆಂಪು ಮೈಬಣ್ಣ, ಸಾಧಾರಣ ಮೈಕಟ್ಟು, ಉದ್ದ ಮುಖ ಹೊಂದಿದ್ದಾಳೆ.
ಮತ್ತೊಂದು ಪ್ರಕರಣದಲ್ಲಿ ಶೋಭಾ ದೇವೇಂದ್ರಪ್ಪ ಗುಡಗುಡಿ ಎಂಬ (16) ವರ್ಷದ ಬಾಲಕಿ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ. ಎಂ.ಎ. ತಿಮ್ಮಾಪುರ ಗ್ರಾಮದಲ್ಲಿ ಕಳೆದ ಫೆ. 14ರಂದು ಹೊಲಕ್ಕೆ ಹೋದವಳು ಮರಳಿ ಬಂದಿಲ್ಲ ಎಂದು ಆಕೆಯ ಮಾವ ರೇಣಪ್ಪ ನಾಗಪ್ಪ ಕೊಮ್ಮರಸಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಾಲಕಿಯು 4 ಎಡಿ 8 ಇಂಚು ಎತ್ತರವಿದ್ದು, ಸಾಧಾರಣ ಮೈಬಣ್ಣ, ತೆಳ್ಳನೆ ಮೈಕಟ್ಟು, ಉದ್ದ ಮುಖ ಹೊಂದಿದ್ದು, ಎಡಗೈ ಮೇಲೆ ಎಸ್‌ಕೆಪಿ ಎಂದು ಇಂಗ್ಲಿಷ್‌ನಲ್ಲಿ ಹಚ್ಚೆ ಹಾಕಿಸಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಇಬ್ಬರ ಸುಳಿವು ದೊರೆತಲ್ಲಿ ಮಾಹಿತಿ ನೀಡುವಂತೆ ಗ್ರಾಮೀಣ ಠಾಣೆ ಸಿಪಿಐ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement