ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಚುನಾವಣೆ: ವೆಚ್ಚ ವೀಕ್ಷಕರ ಆಗಮನ

Lingaraj Badiger
Updated On : 20 Mar 2014, 1:53 am

ಹಾವೇರಿ: ಲೋಕಸಭಾ ಚುನಾವಣೆ ಅಂಗವಾಗಿ ಚುನಾವಣೆಯ ವೆಚ್ಚಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಮೊ: 9481256128ನ್ನು ಸಂಪರ್ಕಿಸಬಹುದೆಂದು ಬುಧವಾರ ಆಗಮಿಸಿದ ಹಾವೇರಿ ಲೋಕಸಭಾ ಕ್ಷೇತ್ರದ ವೆಚ್ಚ  ವೀಕ್ಷಕರಾದ ವಸಂತ ಗೇಸನ್ ಅವರು      ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಜರುಗಿದ ಲೋಕಸಭಾ ಚುನಾವಣೆ ವೆಚ್ಚದ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ. ಮಂಜುನಾಥ ನಾಯಕ ಮಾತನಾಡಿ, ಅಧಿಕಾರಿಗಳಿಗೆ ಚುನಾವಣಾ ವೆಚ್ಚದ ಬಗ್ಗೆ ಸಮಸ್ಯೆಗಳಿದ್ದಲ್ಲಿ ಕೂಡಲೇ ವೆಚ್ಚ ವೀಕ್ಷಕರನ್ನು ಸಂಪರ್ಕಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಹಾಗೂ ಜಿಲ್ಲೆಯ ಎಲ್ಲ ತಾಲೂಕುಗಳ ಚುನಾವಣಾಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement