ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಎಲ್ಲರೂ ತಪ್ಪದೆ ಮತ ಚಲಾಯಿಸಿ: ತುಷಾರ

Srinivasa Murthy VN
Updated On : 25 Mar 2014, 10:51 am

ಕನ್ನಡಪ್ರಭ ವಾರ್ತೆ, ಹಿರೇಕೆರೂರ, ಮಾ. 24
ಮತದಾನ ಪ್ರತಿಯೊಬ್ಬರ ಹಕ್ಕಾಗಿದ್ದು, ಪ್ರತಿ ಪ್ರಜೆಯು ತಪ್ಪದೆ ಮತ ಚಲಾಯಿಸಬೇಕು ಎಂದು ಸ್ವೀಪ್ ಸಮಿತಿ ಕಾರ್ಯದರ್ಶಿ ಗ್ರೆಡ್- 2 ತಹಸೀಲ್ದಾರ್ ತುಷಾರ ಹೊಸೂರ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಸ್ವೀಪ್ ಸಮಿತಿ ವತಿಯಿಂದ ಏರ್ಪಡಿಸಿದ್ದ 2014ನೇ ಸಾಲಿನ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ 1 ಲಕ್ಷ 62 ಸಾವಿರ ಮತದಾರರಿದ್ದು, ಚುನಾವಣೆಯಲ್ಲಿ ಪ್ರತಿಯೊಬ್ಬರು ತಪ್ಪದೆ ಮತದಾನ ಮಾಡಲು ಅವರಿಗೆ ಮನವರಿಕೆ ಮಾಡಿಕೂಡುವುದು ಶಿಬಿರದ ಉದ್ದೇಶವಾಗಿದೆ. ಕಾರಣ ಪ್ರತಿಯೊಬ್ಬ ಪ್ರಜೆಯು ಮತದಾನದ ಬಗ್ಗೆ ತಿಳಿದುಕೊಂಡು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ತಮ್ಮ ಹಕ್ಕನ್ನು ನಿರ್ಭಯವಾಗಿ ಚಲಾಯಿಸಬೇಕೆಂದರು. ಸ್ವೀಪ್ ಸಮಿತಿ ಅಧ್ಯಕ್ಷ ಡಿ.ಎಂ. ಜನವಾಡ ಮಾತನಾಡಿ, ಮತದಾನ ಮಹತ್ವದ ಹಕ್ಕಾಗಿದ್ದು, ಎಲ್ಲರೂ ಮತದಾನ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು. ಮತದಾನ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನ ನಮ್ಮ ಕರ್ತವ್ಯ ಎಂಬುದನ್ನು ಅರಿತುಕೊಂಡು ಹಕ್ಕನ್ನು ಚಲಾಯಿಸಬೇಕು ಎಂದರು.
ಸಮಿತಿ ಸದಸ್ಯರಾದ ಸಿಡಿಪಿಒ ಶ್ರೀನಿವಾಸ ಆಲದರ್ತಿ, ಪಂಪಂ ಮುಖ್ಯಾಧಿಕಾರಿ ರಾಜಕುಮಾರ ಎಂ.ಎಚ್., ಜಿಪಂ ಸಹಾಯಕ ಅಭಿಯಂತರ ಕೆ.ವಿ. ಹಂಚಿನಮನಿ ಉಪಸ್ಥಿತರಿದ್ದರು. ತಾಲೂಕಿನ ಗುತ್ತಿಗೆದಾರರು ಹಾಗೂ ಕಾರ್ಮಿಕರು ಪಾಲ್ಗೊಂಡಿದ್ದರು. ಪ್ರಶಾಂತ ತಿಪ್ಪಣನವರ ನಿರೂಪಿಸಿ, ವಂದಿಸಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಕಾಲೇಜು ವಿಧ್ಯಾರ್ಥಿಗಳಿಂದ ಮಾನವ ಸರಪಳಿ ರಚಿಸಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement