ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮಹಿಳೆಯರಿಂದ ಸುಸಂಸ್ಕೃತ ಸಮಾಜ ನಿರ್ಮಾಣ

Srinivasa Murthy VN
Updated On : 26 Mar 2014, 12:05 pm

ರಾಣಿಬೆನ್ನೂರು: ಒಂದು ದೇಶದ ಆಚಾರ, ವಿಚಾರ ಮತ್ತು ಸಂಸ್ಕೃತಿ ಎತ್ತಿ ಹಿಡಿಯುವಲ್ಲಿ ಮಹಿಳೆಯ ಪಾತ್ರ ಮಹತ್ವದ್ದಾಗಿದೆ. ಸುಸಂಸ್ಕೃತ ಸಮಾಜ ನಿರ್ಮಾಣ ಮಹಿಳೆಯರಿಂದ ಮಾತ್ರ ಸಾಧ್ಯ. ಮಹಿಳೆಯರನ್ನು ಹೊರಗಿಟ್ಟು ಯಾವುದೇ ಪುರಾಣ ಅಥವಾ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಎಂದು ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕ ಎಸ್.ಎಚ್. ಮಜೀದ್ ಹೇಳಿದರು.
ಹಾವೇರಿಯ ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ರಾಣಿಬೆನ್ನೂರಿನ ಆರ್‌ಟಿಇಎಸ್ ಮಹಾವಿದ್ಯಾಲಯ, ಹಾವೇರಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜಕೀಯ, ಸಮಾಜ ಸೇವೆ, ವಿಜ್ಞಾನ, ಸಾರಿಗೆ ಮೊದಲಾದ ಕ್ಷೇತ್ರಗಳಲ್ಲಿ ಮಹಿಳೆಯರು ಸಕ್ರಿಯರಾಗಿ ಭಾಗವಹಿಸುತ್ತಾರೆ ಎನ್ನುವುದು ಸತ್ಯವಾದರೂ ಎಲ್ಲ ರಂಗಗಳಲ್ಲಿಯೂ ಅವರು ಸಮಪ್ರಮಾಣದಲ್ಲಿ ಮುಕ್ತವಾಗಿ ಪಾಲ್ಗೊಳ್ಳುತ್ತಿಲ್ಲ ಎನ್ನುವೂದು ಅಷ್ಟೆ ಸತ್ಯ. ಆದ್ದರಿಂದ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಸಕ್ರಿಯವಾಗಿ ಭಾಗವಹಿಸಿ ಎಲ್ಲ ಕ್ಷೇತ್ರಗಳಲ್ಲಿಯೂ ಸಬಲರಾಗಬೇಕು ಎಂದು ಅವರು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸ್ಮಿತಾ ಸಾವುಕಾರ ಮಾತನಾಡಿ, ಮಹಿಳೆಯರು ಪುರುಷರಷ್ಟೆ ಸರಿಸಮಾನವಾಗಿ ರಾಷ್ಟ್ರ ಮಟ್ಟದಲ್ಲಿ ಮಹಿಳೆಯರು ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿಶಿಷ್ಟ ರೀತಿಯಲ್ಲಿ ಸಂವಿಧಾನಾತ್ಮಕವಾಗಿ ಆಡಳಿತಾತ್ಮಕವಾಗಿ ಕೊಡುಗೆ ನೀಡಿದ್ದಾರೆ. ಮಹಿಳಾ ಹಕ್ಕುಗಳು ಮತ್ತು ಸವಲತ್ತುಗಳು ಕೆಲವೇ ವರ್ಗದ ಮಹಿಳೆಯರ ಸ್ವತ್ತಾಗುತ್ತಿವೆ. ಕೂಲಿ ಮಾಡುವ ಮಹಿಳೆಯರು ಸವಲತ್ತುಗಳಿಂದ ವಂಚಿತರಾಗುತ್ತಿರುವುದು ದುರದೃಷ್ಟಕರ. ಲಿಂಗ ತಾರತಮ್ಯ, ಭ್ರೂಣ ಹತ್ಯೆಯಂತಹ ಮೌಢ್ಯಗಳಿಂದ ಮಹಿಳೆಯರ ಲಿಂಗಾನುಪಾತದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ ಎಂದರು.
ಜನವಿಕಾಸ ಫೌಂಡೇಶನ್ ಅಧ್ಯಕ್ಷೆ ಗೀತಾ ಪಾಟೀಲ್ ಮಾತನಾಡಿ, ಇಂದು ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗಿ ನಡೆಯುತ್ತಿದ್ದು, ಮಹಿಳೆಯರಿಗಾಗಿಯೇ ಅನೇಕ ಕಾನೂನುಗಳಿವೆ. ಅವುಗಳನ್ನು ಬಳಸಿಕೊಳ್ಳಬೇಕು. ನಮ್ಮಲ್ಲಿ ಸಂಘಟನೆ ಇರಲಿ ಯಾರನ್ನು ದೂಷಿಸುವುದು ಬೇಡ, ನಾವೆಲ್ಲರೂ ಸಮಾನರು ಎಂಬ ಭಾವನೆಯಿಂದ ಮುನ್ನಡೆಯೋಣ ಎಂದರು.
'ಮಹಿಳೆಯರ ಹಕ್ಕುಗಳು, ಮಹಿಳಾ ಕಾನೂನು' ಕುರಿತು ವಕೀಲ ಸಂಜೀವ ಶಿರಹಟ್ಟಿ ವಿಶೇಷ ಉಪನ್ಯಾಸ ನೀಡಿದರು. ಪಿ.ಎಸ್. ನಾಯಕ ಸ್ವಾಗತಿಸಿದರು. ಸಂಜೀವ್ ದೇಶಪಾಂಡೆ ನಿರ್ವಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement