ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಳಪೆ ಕಾಮಗಾರಿ: ಕ್ರಮಕ್ಕೆ ಆಗ್ರಹ

Lingaraj Badiger
Updated On : 2 May 2014, 12:08 pm

ಬ್ಯಾಡಗಿ: ನಗರೋಥಾನ ಯೋಜನೆಯಡಿ ಪಟ್ಟಣದಲ್ಲಿ ನಡೆಯುತ್ತಿರುವ ರು. 5 ಕೋಟಿ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸ್ಥಳೀಯ ಶಾಸಕರು ಮೌನವಹಿಸಿರುವುದು ಖೇದಕರ ಸಂಗತಿ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಗುತ್ತಿಗೆದಾರನ ವಿರುದ್ಧ ಕ್ರಮ ಜರುಗಿಸುವಂತೆ ಮಾಜಿ ಶಾಸಕ ಸುರೇಶಗೌಡ ಪಾಟೀಲ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕಳೆದ ಬಿಜೆಪಿ ಸರ್ಕಾರ ನಗರೋತ್ಥಾನ ಯೋಜನೆಯಡಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ರು. 5 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ ನೀಡಿತ್ತು. ಅದರೆ, ಇದೀಗ ಗುತ್ತಿಗೆದಾರರು ತಮಗಿಷ್ಟ ಬಂದಂತೆ ನಡೆದುಕೊಳ್ಳುತ್ತಿದ್ದಾರೆ. ಕಳಪೆ ಗುಣಮಟ್ಟದ ವಸ್ತು ಬಳಕೆ ಮಾಡುತ್ತಿರುವ ಗುತ್ತಿಗೆದಾರರು ಸರ್ಕಾರದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದು, ಇಲ್ಲದಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳು ಸಾರ್ವಜನಿಕರ ಸಹಕಾರದೊಂದಿಗೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement