ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

6ಕ್ಕೆ 'ವಂದನೆ ಅಭಿವಂದನೆ ನಿಂದಕರಿಗೆ' ಪುಸ್ತಕ ಬಿಡುಗಡೆ

Rashmi Kasaragodu
Updated On : 4 May 2014, 1:00 am

ರಾಣಿಬೆನ್ನೂರು: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ರಾಣಿಬೆನ್ನೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮೇ 6ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಮಾಕನೂರು ಗ್ರಾಮದ ಯುವಕವಿ, ಸಾಹಿತಿ ಹಾಗೂ ಶಿಕ್ಷಕ ಶಿವಾನಂದ ಬುಳ್ಳಮ್ಮನವರ ರಚಿಸಿರುವ 'ವಂದನೆ ಅಭಿವಂದನೆ ನಿಂದಕರಿಗೆ' ಹನಿಗವನಗಳ ಸಂಕಲನ ಬಿಡುಗಡೆ ಸಮಾರಂಭ ಏರ್ಪಡಿಸಿದೆ. ಕಾರ್ಯಕ್ರಮದ ಸಾನಿಧ್ಯ ಹಾಗೂ ಪುಸ್ತಕ ಲೋಕಾರ್ಪಣೆಯನ್ನು ರಾಜನಹಳ್ಳಿಯ ವಾಲ್ಮೀಕಿ ಮಹಾಸಂಸ್ಥಾನದ ಪೀಠಾಧಿಪತಿ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮಿಗಳು ನೆರವೇರಿಸುವರು. ಹಾವೇರಿ ತಾಲೂಕಿನ ಹಾವನೂರು ಗ್ರಾಮದ ದಳವಾಯಿ ಮಠದ ಶಿವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಿ.ಬಿ. ಮಾಸಣಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement