ಬಸ್ ಪಾಸ್ಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ
ಹಾವೇರಿ: ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಪಾಸ್ ನೀಡದಿರುವುದು ಮತ್ತು ಕೇಳಲು ಬಂದಾಗ ಅಸಭ್ಯವಾಗಿ ವರ್ತಿಸುತ್ತಿರುವ ಸಾರಿಗೆ ಸಂಸ್ಥೆ ಸಿಬ್ಬಂದಿ ವರ್ತನೆ ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿತ್ತು. ಆದ್ದರಿಂದ ಪದವಿ ವಿದ್ಯಾರ್ಥಿಗಳ ಬಸ್ ಪಾಸ್ಗಳನ್ನು ನವೀಕರಣ ಮಾಡಲು ನೀಡಲಾಗಿತ್ತು. ಆದರೆ, ಇದುವರೆಗೆ ಅದನ್ನು ಸಾರಿಗೆ ಸಂಸ್ಥೆಯಿಂದ ವಾಪಾಸ್ ಕೊಟ್ಟಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಡಿಪೋ ಮ್ಯಾನೇಜರ್ ಆಗಮಿಸಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ. ಶೀಘ್ರ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡುತ್ತೇವೆ ಎಂದು ಭರವಸೆ ನೀಡಿದರು. ಸಿದು ಮದರಖಂಡಿ, ದೀಪಕ್ ಹೆಬ್ಬಾರೆ, ಪುಟ್ಟರಾಜ ಮುಗಳಿ, ಫಕ್ಕೀರಗೌಡ ಭರಮಗೌಡ್ರ ಇದ್ದರು.