ಅಭಿವೃದ್ಧಿ ನೋಡಿ ಗೆಲ್ಲಿಸಿದ್ದಕ್ಕೆ ಕೃತಜ್ಞತೆ: ಉದಾಸಿ
ಬ್ಯಾಡಗಿ: ಜನ ನನ್ನ ಮೇಲೆ ಪ್ರೀತಿ ವಿಶ್ವಾಸವನ್ನಿಟ್ಟು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯ ನೋಡಿ ಎರಡನೇ ಬಾರಿಗೂ ಹೆಚ್ಚು ಮತಗಳನ್ನು ನೀಡಿ ಆಯ್ಕೆ ಮಾಡಿದ್ದಕ್ಕಾಗಿ ಕ್ಷೇತ್ರದ ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ನೂತನ ಸಂಸದ ಶಿವಕುಮಾರ ಉದಾಸಿ ಹೇಳಿದರು.
ತಾಲೂಕಿನ ಕದರಮಂಡಲಗಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಮಾನಗಳಲ್ಲಿ ಕೈಗೊಳ್ಳಲಾಗುವುದು. ಕ್ಷೇತ್ರದ ಜನರ ಆಶೀರ್ವಾದ ನನಗೆ ಮುಖ್ಯ ಎಂದರು. ಕ್ಷೇತ್ರದ ಎಲ್ಲಡೆಯೂ ಜನ ನನಗೆ ಹೆಚ್ಚು ಮತಗಳನ್ನು ನೀಡಿದ್ದಾರೆ. ವಿರೋಧ ಪಕ್ಷದವರ ಟೀಕೆಗೆ ಜನತೆ ನನ್ನನ್ನು ಗೆಲ್ಲಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ್ ಸಜ್ಜನರ, ಮಾಜಿ ಶಾಸಕ ಸುರೇಶಗೌಡ್ರ ಪಾಟೀಲ, ಜಿಪಂ ಸದಸ್ಯ ಶಂಕ್ರಣ್ಣ ಮಾತನವರ, ಶಿವರಾಜ ಮುದ್ದಪ್ಪಳವರ, ತಾಲೂಕು ಬಿಜೆಪಿ ಅಧ್ಯಕ್ಷ ರಾಮಣ್ಣ ಉಕ್ಕುಂದ, ಮುರಿಗೆಪ್ಪ ಶೆಟ್ಟರ, ರವೀಂದ್ರ ಪಟ್ಟಣಶೆಟ್ಟಿ, ಚಂದ್ರಪ್ಪ ಮುಚ್ಚಟ್ಟಿ, ಪ್ರಕಾಶಗೌಡ್ರ ಪಾಟೀಲ, ಮಾಲತೇಶ ದೊಡ್ಡಮನಿ, ಹನುಮಂತಪ್ಪ ನಾಯ್ಕರ, ವೀರನಗೌಡ್ರ ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.