ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ವಿದ್ಯುತ್ತಿಗಾಗಿ ಹೆಸ್ಕಾಂಗೆ ಮುತ್ತಿಗೆ

Lingaraj Badiger
Updated On : 20 May 2014, 12:42 pm

ಹಿರೇಕೆರೂರು: ಅಕ್ರಮ ಸಕ್ರಮ ಯೋಜನೆಯಲ್ಲಿ ವಿದ್ಯುದ್ದೀಕರಣಗೊಂಡ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಬೇಕು, ಗ್ರಾಮೀಣ ಪ್ರದೇಶಗಳಲ್ಲಿ ಸುಟ್ಟ ಟಿಸಿಗಳನ್ನು ಬದಲಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ತಾಲೂಕು ರೈತ ಸಂಘದ ಸದಸ್ಯರು ಸೋಮವಾರ ಪಟ್ಟಣದ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ರಾಜಶೇಖರ ದೂದಿಹಳ್ಳಿ ಮಾತನಾಡಿ, ಗಂಗಾ ಕಲ್ಯಾಣ ಪಂಪ್ಸೆಟ್ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಈ ಹಿಂದೆ ಪಟ್ಟಣದ ಹೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಿದ ವೇಳೆ ಎಲ್ಲ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದ ಅಧಿಕಾರಿಗಳು, ಇದುವರೆಗೂ ಈ ಬಗ್ಗೆ ಗಮನಹರಿಸಿಲ್ಲ. ಕೇಳಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಆದ್ದರಿಂದ ಅನಿವಾರ್ಯವಾಗಿ ಅಧಿಕಾರಿಗಳನ್ನು ಕೂಡಿ ಹಾಕಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗಿದೆ ಎಂದು ತಿಳಿಸಿದರು.
ಕೂಡಲೆ ಈ ಎಲ್ಲ ಬೇಡಿಕೆಗಳನ್ನು ಈಡೇರಿಸದಿದ್ದರೆ ಹುಬ್ಬಳ್ಳಿ ಹೆಸ್ಕಾಂ ಕಚೇರಿಗೆ ರೈತ ಸಂಘದ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ರೈತ ಮುಖಂಡ ರಮೇಶ ಕಾಲ್ವೀಹಳ್ಳಿ, ಜಯಕುಮಾರ ಹುಲ್ಲಿನಕೊಪ್ಪ, ಶಿವಯೋಗಿ ಕೆಂಚಳ್ಳಿ, ಬಸಪ್ಪ ಮಲ್ಲೇನಹಳ್ಳಿ, ಮಾರುತಿ ಹದಡಿ, ವೀರಪ್ಪ ಮಳವಳ್ಳಿ, ಹನುಮಂತಪ್ಪ ಹದಡಿ ಮತ್ತಿತರರು ಇದ್ದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement