ಕೊಡಗು

'ಅನಂತ' ಪ್ರಯತ್ನದಿಂದ ಪರಿಹಾರ: ಬಿಜೆಪಿ

ಜಮ್ಮಾ ಬಾಣೆ ತಿದ್ದುಪಡಿ ವಿಧೇಯಕಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಕ್ಷಾತೀತವಾದ ಚಿಂತನೆಯಿಂದ ಅಂಕಿತ ಹಾಕುವ ಮೂಲಕ ಕಳೆದ ಹಲ ದಶಕಗಳಿಂದ ಕೊಡಗಿನ ಭೂ ಹಿಡುವಳಿದಾರರು ಎದುರಿಸುತ್ತಿದ್ದ ಜ್ವಲಂತ ಸಮಸ್ಯೆಗೆ ಮುಕ್ತಿ ನೀಡುವ ಮೂಲಕ ಜಿಲ್ಲೆಯ 39 ಸಾವಿರ ಹೆಕ್ಟೇರ್ ಹಿಡುವಳಿದಾರರಿಗೆ ಮಾಲೀಕತ್ವ ಸಿಕ್ಕಿದೆ ಎಂದು ಜಿಲ್ಲಾ ಬಿಜೆಪಿ ಹರ್ಷ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಡಿ. ಮಂಜುನಾಥ್, ಜಮ್ಮಾ ಸಮಸ್ಯೆಗೆ ಶಾಶ್ವತ ಅಂತ್ಯ ಕಾಣಿಸುವ ನಿಟ್ಟಿನಲ್ಲಿ ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಅಪ್ಪಚ್ಚು ರಂಜನ್ ಅವರ ಪ್ರಯತ್ನದೊಂದಿಗೆ ಪಕ್ಷಾತೀತವಾಗಿ ಕೈ ಜೋಡಿಸಿದ ಸರ್ವ ಪಕ್ಷಗಳ ಮುಖಂಡರಿಗೆ ಈ ಸಂದರ್ಭ  ಅಭಿನಂದನೆ ಸಲ್ಲಿಸಿದರು.
ಸದಾನಂದ ಗೌಡರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಜಮ್ಮಾ ಬಾಣೆ ಇತ್ಯರ್ಥದ ಪ್ರಯತ್ನವಾಗಿ ಕರ್ನಾಟಕ ರಾಜ್ಯ ಭೂ ಕಂದಾಯ ಕಾಯ್ದೆಯ 3ನೇ ತಿದ್ದುಪಡಿಯ ವಿಧೇಯಕ ಮಂಡಿಸಿದಾಗ ಎಲ್ಲಾ ಪಕ್ಷದ ಪ್ರಮುಖರು ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸುವುದರೊಂದಿಗೆ, ವಿಧೇಯಕವನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿತ್ತು ಎಂದು ಸ್ಮರಿಸಿದ ಬಿ.ಡಿ. ಮಂಜುನಾಥ್, ಈ  ಹಂತದಲ್ಲಿ ರಾಜ್ಯಪಾಲರು, ತಮ್ಮ ಮಿತಿಯನ್ನು ಮೀರಿದೆಯೆಂದು ಕಾರಣ ನೀಡಿ ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಿಕೊಟ್ಟಿದ್ದರು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ವಿಧೇಯಕ ಅಂಗೀಕಾರಕ್ಕೆ ಕೇಂದ್ರದ ಮೇಲೆ ಒತ್ತಡ ಹೇರಿದ್ದರ ಪರಿಣಾಮ ಸಮಸ್ಯೆ ಬಗೆಹರಿದಿದೆ ಎಂದು ಅಭಿಪ್ರಾಯುಪಟ್ಟರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಮಾತನಾಡಿ, ಬಿಜೆಪಿ ಸರ್ಕಾರ ಅಧಿಕಾರ ಸ್ವೀಕಾರ ಮಾಡಿ ಆರಂಭದಲ್ಲಿ ಜಮ್ಮಾ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿತ್ತು. ಇದೀಗ ಈ ಹಿಂದೆ ನುಡಿದಂತೇ ಬಿಜೆಪಿ  ಸರ್ಕಾರ ನಡೆದುಕೊಂಡಿದೆ. ಜಮ್ಮಾ ಸಮಸ್ಯೆ ಇತ್ಯರ್ಥಕ್ಕೆ ಕಾರಣರಾದ ವಿಪಕ್ಷಗಳ ಪ್ರಮುಖರಾದ ಎಚ್.ಡಿ. ರೇವಣ್ಣ, ಸಿದ್ದರಾಮಯ್ಯ ಸೇರಿದಂತೆ ಎಲ್ಲ ಪ್ರಮುಖರಿಗೆ ಧನ್ಯವಾದಗಳನ್ನು ಬಿಜೆಪಿ ಸಲ್ಲಿಸುತ್ತದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಜಿಲ್‌ಕೃಷ್ಣನ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!