ಕೊಡಗು

ಜಿಲ್ಲಾ ಮಟ್ಟದ ಯುವಜನ ಮೇಳ

ಮೂರ್ನಾಡು: ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಜನತೆಯ ಪಾತ್ರ ಅತಿ ಮುಖ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಯುವ ಸಂಘಟನೆಗಳ ಮೂಲಕ ಯುವಕ ಯುವತಿಯರ ಶಕ್ತಿಯ ಸದ್ಬಳಕೆಯಾಗಬೇಕು ಎಂದು ಕೊಡಗು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಣಿ ನಂಜಪ್ಪ ಹೇಳಿದರು.
ಕೊಡಗು ಜಿಲ್ಲಾ ಪಂಚಾಯಿತಿ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಆಶ್ರಯದಲ್ಲಿ ತೊಂಭತ್ತುಮನೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಏರ್ಪಡಿಸಲಾದ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಉದ್ಘಾಟಿಸಿ, ಮಾತನಾಡಿದರು.
ಕೇವಲ ಉದ್ಯೋಗಕ್ಕಾಗಿ ಕಲಿಯುವ ವಿದ್ಯೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯವಿಲ್ಲ. ಇಂತಹ ಮೇಳಗಳಿಂದ ಯುವಕ ಯುವತಿಯರಿಗೆ ಪ್ರತಿಭೆಗಳನ್ನು ಹೊರಹೊಮ್ಮಿಸಲು ಸೂಕ್ತ ವೇದಿಕೆ ಸಿಕ್ಕಿದಂತಾಗುತ್ತದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆಯನ್ನು ಹಾಕತ್ತೂರು ಗ್ರಾ.ಪಂ. ಅಧ್ಯಕ್ಷ ಎಂ.ಯು. ಹನೀಫ್ ವಹಿಸಿದರು.  
ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಜಿ. ಗಾಯತ್ರಿ ಮಾತನಾಡಿದರು.
ವೇದಿಕೆಯಲ್ಲಿ ಜಿಪಂಸದಸ್ಯೆ ಬೀನಾ ಬೊಳ್ಳಮ್ಮ, ಜಿಲ್ಲಾ ಯುವ ಒಕ್ಕೂಟ ಅಧ್ಯಕ್ಷ ಕೆ. ಪ್ರಮೋದ್ ಗಣಪತಿ, ಜಿಲ್ಲಾ ಯುವ ಒಕ್ಕೂಟ ಮಾಜಿ ಅಧ್ಯಕ್ಷ ಟಾಟು ಮೊಣ್ಣಪ್ಪ, ಎಂ.ಬಿ. ಜೋಯಪ್ಪ, ಕೆ.ಎಂ. ಖಾಸಿಂ, ಪಿ.ಈ. ದಿವಾಕರ್, ಕಾರ್ಯದರ್ಶಿ ಕೆ.ಎಚ್. ಜಲೀಲ್, ರಾಜ್ಯ ಯುವ ಪ್ರಶಸ್ತಿ ವಿಜೇತ ಪಿ.ಪಿ. ಸುಕುಮಾರ್, ಹಾಕತ್ತೂರು ಗ್ರಾಪಂ ಸದಸ್ಯೆ ಎಚ್.ಜಿ. ರತ್ನ, ರತ್ತು ಬೆಳ್ಳಿಯ್ಯಪ್ಪ, ಮಡಿಕೇರಿ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ವಿಜಯ್, ವಿರಾಜಪೇಟೆ ತಾಲೂಕು ಯುವ ಒಕ್ಕೂಟ ಅಧ್ಯಕ್ಷ ವಿನ್ಸೆಂಟ್ ಬಾಬು ಇದ್ದರು.
ವಿದ್ಯಾರ್ಥಿಗಳಾದ ರಮ್ಯಶ್ರೀ ತಂಡ ಪ್ರಾರ್ಥಿಸಿ, ರಾಜ್ಯ ಪ್ರಶಸ್ತಿ ವಿಜೇತ ಪಿ.ಪಿ. ಸುಕುಮಾರ್ ಸ್ವಾಗತಿಸಿ, ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಈ. ದಿವಾಕರ್ ನಿರೂಪಿಸಿ, ತಿನೇತ್ರ ಯುವಕ ಸಂಘದ ಉಪಾಧ್ಯಕ್ಷ ಎಂ.ಎಂ. ಅಬೂಬ್ಬಕರ್ ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೊಲೀಸ್ ಕಮಿಷನರ್ ಕಚೇರಿ ಮುಂದೆ HDK ಧರಣಿ: ಸ್ಟಿಂಗ್‌ ರೂವಾರಿಯ ಬಂಧನಕ್ಕೆ ಆಗ್ರಹ; ಎರಡು ದಿನಗಳ ಡೆಡ್‌ಲೈನ್‌!

ಭಾವಿ ಪತಿಯನ್ನೇ ಹತ್ಯೆಗೈದ ರಿಂಗ್ ರೋಡ್ ಶುಭಾಗೆ ಬಿಗ್ ಶಾಕ್: ಕ್ಷಮಾದಾನ ಅರ್ಜಿ ತಿರಸ್ಕರಿಸಿದ ಸಚಿವ ಸಂಪುಟ!

ಸಂಶಯ ಬಂದ್ರೆ ಕುಮಾರಸ್ವಾಮಿಯನ್ನೂ ವಶಕ್ಕೆ ಪಡೆಯುತ್ತೇವೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ವಿವಿ ಫ್ರೆಟರ್ನಿಟಿ ಕಾರ್ಯಕ್ರಮದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ‘ನನ್ನ ಸರದಿ ಯಾವಾಗ?’ ಎಂದು ಕೂಗಿದ ಪುರುಷರು!

ಹೊಸ ಪಕ್ಷದ ಹೆಸರು ಘೋಷಿಸಿದ ಮಾಜಿ IAS ಅಧಿಕಾರಿ ದಿವ್ಯಾ ಮಿತ್ತಲ್; 2027ರ ಯುಪಿ ಚುನಾವಣೆಗೆ ಸ್ಪರ್ಧೆ