ಕೊಡಗು

ಅನಿಯಮಿತ ವಿದ್ಯುತ್ ಕಡಿತ; ಪ್ರತಿಭಟನೆ

ಮಡಿಕೇರಿ: ಮಡಿಕೇರಿ ನಗರ ವ್ಯಾಪ್ತಿಯಲ್ಲಿನ ಅನಿಯಮಿತ ವಿದ್ಯುತ್ ಕಡಿತ ಹಾಗೂ ಕಲುಷಿತ ನೀರು ಸರಬರಾಜನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ನಗರ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಎಸ್‌ಡಿಪಿಐ ನಗರಾಧ್ಯಕ್ಷ ನೂರುದ್ದೀನ್, ಜಿಲ್ಲಾಧ್ಯಕ್ಷ ಫಜಲುಲ್ಲಾ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.
ನಗರಸಭಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ವಿದ್ಯುತ್ ಇಲಾಖೆ ಮನಬಂದಂತೆ ಲೋಡ್‌ಶೆಡ್ಡಿಂಗ್ ಮಾಡುತ್ತಿರುವುದು ಅವೈಜ್ಞಾನಿಕ. ಇದರಿಂದ ವಿದ್ಯಾರ್ಥಿಗಳನ್ನು ಒಳಗೊಂಡಂತೆ ವಾಣಿಜ್ಯೋದ್ಯಮಿಗಳು, ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಮನವಿಯಲ್ಲಿ ತಿಳಿಸಲಾಗಿದೆ.
ನಗರದ ಕೆಲ ಬಡಾವಣೆಗಳಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು, ಈ ಬಗ್ಗೆ ನಗರಸಭೆಯ ಅಧಿಕಾರಿಗಳು ಪರಿಶೀಲಿಸಿ ಕಲುಷಿತ ನೀರು ಸರಬರಾಜಾಗದಂತೆ ಎಚ್ಚರಿಕೆ ವಹಿಸಲು ನಗರಸಭೆಗೆ ಸೂಚನೆ ನೀಡುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಎಸ್‌ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿನ್ ಮೊಹಿಸಿನ್, ನಗರ ಕಾರ್ಯದರ್ಶಿ  ಅಬ್ದುಲ್ ಅಡ್ಕಾರ್, ಉಪಾಧ್ಯಕ್ಷ ಖಲೀಲ್, ಖಜಾಂಚಿ ಬಷೀರ್ ಸೇರಿದಂತೆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್