ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಡಗು

ಭೂ ಕಂದಾಯ ಕಾಯ್ದೆ ತಿದ್ದುಪಡಿಗೆ ಅಂಕಿತ: ರಮೇಶ್ ಸಂತಸ

Parashurama
Updated On : 10 Feb 2013, 12:36 pm

ಮಡಿಕೇರಿ: ಕರ್ನಾಟಕ ಭೂ ಕಂದಾಯ ಕಾಯ್ದೆಯ ಮೂರನೇ ತಿದ್ದುಪಡಿ ರಾಷ್ಟ್ರಪತಿಗಳ ಅಂಕಿತದೊಂದಿಗೆ ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾಗುವ ಮೂಲಕ ಹಲವು ದಶಕಗಳ ಜಮ್ಮಾ ಬಾಣೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿದಂತಾಗಿದ್ದು, ಇದು ದಾಸ್ಯದಿಂದ ಮುಕ್ತವಾದ ಸಂತಸದ ಕ್ಷಣವೆಂದು ನಾಪೋಕ್ಲು ಬಿಜೆಪಿ ಸ್ಥಾನೀಯ ಸಮಿತಿಯ ಅಧ್ಯಕ್ಷ ಕುಂಡ್ಯೋಳಂಡ ರಮೇಶ್ ಮದ್ದಯ್ಯ ಹರ್ಷ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಮದ್ದಯ್ಯ, ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರಲ್ಲಿ ಜಾರಿಗೆ ಬಂದಿದ್ದರು. ಅಧಿಕಾರ ಶಾಹಿಗಳು ಇದರ ಪ್ರಯೋಜನ ಜಿಲ್ಲೆಯ ಹಿಡುವಳಿದಾರರಿಗೆ ದೊರಕದಂತೆ ನೋಡಿಕೊಳ್ಳುವ ಮೂಲಕ ತಮ್ಮನ್ನು ಗುಲಾಮರಂತೆ ನಡೆಸಿಕೊಂಡು ಬಂದಿದ್ದರೆಂದು ದೂರಿದರು.
ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಚಕ್ಕೇರ ಪೂವಯ್ಯ ಪ್ರಕರಣದಲ್ಲಿ ಬಾಣೆ ಹಿಡುವಳಿದಾರರಿಗೆ ಜಯ ದೊರಕಿಸಿಕೊಟ್ಟಿದ್ದರೂ ಅದನ್ನು ಅನುಷ್ಠಾನಗೊಳಿಸದೆ ಅಧಿಕಾರಷಾಹಿಗಳು ಜಿಲ್ಲೆಯ ಜನತೆಗೆ ಅನ್ಯಾಯವೆಸಗಿದ್ದಾರೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಪಾಡಿಯಮ್ಮಂಡ ಮನು ಮಹೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments