ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಡಗು

ವನ್ಯಧಾಮದಲ್ಲಿ ಮರ ಹನನ ನಿಲ್ಲಿಸಲು ಆಗ್ರಹ

Parashurama
Updated On : 10 Feb 2013, 12:30 pm

ಮಡಿಕೇರಿ: ಭಾಗಮಂಡಲ ಹೋಬಳಿಯ ತಣ್ಣಿಮಾನಿ, ಕರಿಕೆ ಗ್ರಾಮಕ್ಕೆ ಒಳಪಟ್ಟ ತಲಕಾವೇರಿ ವನ್ಯಧಾಮದ ಪರಿಮಿತಿಗೆ ಒಳಪಡುವ ಪ್ರದೇಶದಲ್ಲಿ ಮರಗಳನ್ನು ಕಡಿಯುವ ಪ್ರಯತ್ನ ನಡೆದಿದ್ದು, ಅದನ್ನು ತಕ್ಷಣ ನಿಲ್ಲಿಸುವಂತೆ ಕಾವೇರಿ ಸೇನೆಯ ಪ್ರಧಾನ ಸಂಚಾಲಕ ಕೆ.ಎ. ರವಿ ಚಂಗಪ್ಪ ವನ್ಯ ಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳನ್ನು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ತಲಕಾವೇರಿ ವನ್ಯಧಾಮಕ್ಕೆ ಒಳಪಟ್ಟ ಪ್ರದೇಶಗಳಲ್ಲಿರುವ ಅಕೇಶಿಯಾ, ಸಿಲ್ವರ್ ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಕಡಿಯಲು ಸಂಖ್ಯೆಗಳನ್ನು ಹಚ್ಚಲಾಗಿದೆಯೆಂದು ಮಾಹಿತಿ ನೀಡಿದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ರಿಟ್‌ಪಿಟಿಷನ್ ಪ್ರಕಾರ, ಅರಣ್ಯ ಸಂರಕ್ಷಣಾ ಕಾಯ್ದೆ ಮತ್ತು ವನ್ಯಧಾಮ ಸಂರಕ್ಷಣಾ ಕಾಯ್ದೆಯನ್ವಯ ವನ್ಯಧಾಮದ ಒಳಗೆ ಇಲ್ಲವೆ ಮೀಸಲು ಅರಣ್ಯದೊಳಗಡೆ ಮರಕಡಿತಲೆ ಸೇರಿದಂತೆ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸುವುದಿದ್ದಲ್ಲಿ ಸೆಂಟ್ರಲ್ ಎಂಪವರ್ಡ್ ಸಮಿತಿಯ ಸಮ್ಮತಿ ಪಡೆಯಬೇಕಾಗುತ್ತದೆಂದು ಸ್ಪಷ್ಟಪಡಿಸಿದರು. ಈ ಯಾವುದೇ ಆದೇಶವನ್ನು ಪಡೆಯದೆ ತಮರಗಳನ್ನು ಕಡಿಯಲು ಮುಂದಾದಲ್ಲಿ ಉಚ್ಚ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments