ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಡಗು

ಸರ್ಕಾರಿ ಆಸ್ಪತ್ರೆ ವೈದ್ಯರ ಮುಷ್ಕರ ಮುಂದುವರಿಕೆ

Parashurama
Updated On : 10 Feb 2013, 12:34 pm

ಕುಶಾಲನಗರ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿ ಮುಷ್ಕರ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಕುಶಾಲನಗರ, ನೆರೆಯ ಕೊಪ್ಪ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ರೋಗಿಗಳು ಖಾಸಗಿ ವೈದ್ಯರ ಮೊರೆ ಹೋಗುವಂತಹ ಸ್ಥಿತಿ ಉಂಟಾಯಿತು.
ಕುಶಾಲನಗರ ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶಿವರಾಮ್ ನಾಯಕ್ ಅವರು ಮಾಹಿತಿ ನೀಡಿ, ಹಲವು ವರ್ಷಗಳಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಿದ್ದರೂ ಸರ್ಕಾರವು ಬೇಡಿಕೆ ಈಡೇರಿಸುವಲ್ಲಿ ವಿಫಲಗೊಂಡಿದೆ. ಮಾಸಿಕ ವೇತನ ನೀಡುವುದು, ಜಿಲ್ಲಾ ಆಸ್ಪತ್ರೆಗಳನ್ನು ವೈದ್ಯಕೀಯ ಕಾಲೇಜುಗಳಿಗೆ ವಹಿಸಿದ್ದನ್ನು ವಾಪಸ್ ಪಡೆಯುವುದು ಮತ್ತು ಆಸ್ಪತ್ರೆಗಳನ್ನು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಿಂದ ಹೊರತುಪಡಿಸುವುದು ಸೇರಿದಂತೆ ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಪರಿಣಾಮಕಾರಿ ಮುಷ್ಕರ ನಡೆಸುತ್ತಿರುವುದಾಗಿ ತಿಳಿಸಿದರು. ತುರ್ತು ಸಂದರ್ಭ ರೋಗಿಗಳಿಗೆ ಚಿಕಿತ್ಸೆಗೆ ಕ್ರಮ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments