ಕೊಡಗು

ಮೂರ್ನಾಡು: ಗ್ರಾಹಕರ ದಿನಾಚರಣೆ

ಮೂರ್ನಾಡು: ಇಲ್ಲಿನ ಬ್ಯಾಂಕ್ ಆಫ್ ಮಹಾರಾಷ್ಟ್ರ ಶಾಖೆಯಲ್ಲಿ ಗ್ರಾಹಕರ ದಿನಚಾರಣೆ ಆಚರಿಸಲಾಯಿತು.
ಬ್ಯಾಂಕ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ಕೆ. ಸೊಲೋಮನ್ ರವಿ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಏಕೈಕ ಶಾಖೆ ಮೂರ್ನಾಡಿನಲ್ಲಿದ್ದು ಇಲ್ಲಿ ಗ್ರಾಹಕರ ಸಹಕಾರ ಉತ್ತಮವಾಗಿದೆ. ಬ್ಯಾಂಕ್ ಉನ್ನತಿಯತ್ತ ಸಾಗಲು ಗ್ರಾಹಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ಬ್ಯಾಂಕ್ ಈಗಾಗಲೇ ಪ್ರತಿಯೊಂದು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಉಳಿತಾಯ ಖಾತೆ ಪ್ರಾರಂಭಿಸಿದೆ. ಇದರಲ್ಲಿ ಶೇ.70ರಷ್ಟು ವಿದ್ಯಾರ್ಥಿಗಳು ಉಳಿತಾಯ ಖಾತೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿ ಇಲ್ಲಿನ ಶಿಕ್ಷಣ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳ ಸಹಕಾರ ಸಂಪೂರ್ಣವಾಗಿ ಬ್ಯಾಂಕಿಗೆ ದೊರಕುತ್ತಿದ್ದು ಮುಂದೆ ಕೂಡ ಪ್ರತಿಯೊಬ್ಬರೂ ಸಹಕಾರ ನೀಡಬೇಕೆಂದು ತಿಳಿಸಿದರು.
ಬ್ಯಾಂಕ್ ಶಾಲಾ ಮಕ್ಕಳಿಗೆ ಉಳಿತಾಯ ಖಾತೆಗಳನ್ನು ತೆರೆಯಲು ಪ್ರಾರಂಭಿಸಿ ವಿದ್ಯಾರ್ಥಿಗಳಲ್ಲಿ ಉಳಿತಾಯ ಮನೋಭಾವನೆಯನ್ನು ಮೂಡಿಸುವ ವ್ಯವಸ್ಥೆ ಬಹಳ ಪ್ರಯೋಜನಕಾರಿಯಾಗಿದೆ ಎಂದು ಗ್ರಾಹಕರು ಹರ್ಷ ವ್ಯಕ್ತ ಪಡಿಸಿದರು. ಮೂರ್ನಾಡಿನಲ್ಲಿ ಎಟಿಎಂ ವ್ಯವಸ್ಥೆಯಿಲ್ಲದೆ ಗ್ರಾಹಕರು ಪರದಾಡಬೇಕಾಗಿದ್ದು, ಬ್ಯಾಂಕಿನ ಎ.ಟಿ.ಎಂ. ವ್ಯವಸ್ಥೆಯನ್ನು ಕಲ್ಪಿಸುವಂತೆ ಗ್ರಾಹಕರು ಮನವಿ ಮಾಡಿದರು.
ಬ್ಯಾಂಕ್ ಆಫ್ ಮಹಾರಾಷ್ಟ್ರದ ಮಲ್ಲೀರ ತಿಮ್ಮಯ್ಯ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!