ಕೊಟೇಶನ್ ಆಹ್ವಾನ
ಮಡಿಕೇರಿ: ಕುಶಾಲನಗರದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಬಡತನ ರೇಖೆಗಿಂತ ಕೆಳಗಿರುವವರಿಗೆ ಎಸ್ಜೆಎಸ್ಆರ್ವೈ ಯೋಜನೆಯಡಿ 2012-13ನೇ ಸಾಲಿನ ಉದ್ಯಮಶೀಲತಾ ತರಬೇತಿ ಯೋಜನೆಯಡಿ ಲಘು ವಾಹನ ಚಾಲನಾ ತರಬೇತಿ ನೀಡಲು ವಿಟಿಪಿ ಸಂಸ್ಥೆ, ನೋಂದಾಯಿತ ಲಘು ವಾಹನ ಶಾಲೆಗಳಿಂದ ಕೊಟೇಶನ್ ಆಹ್ವಾನಿಸಲಾಗಿದೆ. ಅರ್ಹ ಆಸಕ್ತರು ಒಬ್ಬ ಅಭ್ಯರ್ಥಿಗೆ ತರಬೇತಿ ನೀಡಲು ತಗಲುವ ದರವನ್ನು ನಮೂದಿಸಿ ಕೊಟೇಶನ್ನ್ನು ಮುಚ್ಚಿದ ಲಕೋಟೆಯಲ್ಲಿ ಫೆ.21ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬೇಕು. ಕಾಲ ಮೀರಿ ಬಂದ ಕೊಟೇಶನ್ಗಳನ್ನು ಪರಿಗಣಿಸಲಾಗುವುದಿಲ್ಲ. ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಕಮ್ಯುನಿಟಿ ಆಫೇರ್ಸ್ ಆಫೀಸರ್, ಪಟ್ಟಣ ಪಂಚಾಯಿತಿ, ಕುಶಾಲನಗರ ಇವರನ್ನು ಸಂಪರ್ಕಿಸಬಹುದು ಎಂದು ಕುಶಾಲನಗರದ ಪಪಂ ಇಒ ತಿಳಿಸಿದ್ದಾರೆ.
ಇಂದು ಚಿಗುರು ಕಾರ್ಯಕ್ರಮ
ಮಡಿಕೇರಿ: ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಕೊಳಕೇರಿಯ ಚೆಪ್ಪಂಡಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.14ರಂದು ಮಧ್ಯಾಹ್ನ 2 ಗಂಟೆಗೆ ಚಿಗುರು ಕಾರ್ಯಕ್ರಮ ನಡೆಯಲಿದೆ. ತಾ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂಡಂಡ ಪ್ರತಿಜಾ ಅಚ್ಚಪ್ಪ, ಎಸ್ಡಿಎಂಸಿ ಅಧ್ಯಕ್ಷ ಎಂ.ಎಂ. ಮಹಮ್ಮದ್, ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಮಣಿ ನಂಜಪ್ಪ, ಸದಸ್ಯೆ ಬೊಪ್ಪಂಡ ಬೊಳ್ಳಮ್ಮ ನಾಣಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಸೂರ್ಯನಮಸ್ಕಾರ
ಮಡಿಕೇರಿ: ಭಾರತೀಯ ವಿದ್ಯಾಭವನದ ಯೋಗವಿಭಾಗ ಮತ್ತು ಪಥಂಜಲಿ ಶಿಕ್ಷಣ ಸಮಿತಿ ವತಿಯಿಂದ 17ರಂದು ಮಡಿಕೇರಿಯ ರಾಜಾಸೀಟ್ ಉದ್ಯಾನವನದಲ್ಲಿ ರಥಸಪ್ತಮಿ ನಿಮಿತ್ತ 108 ಸೂರ್ಯನಮಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.