ಟಾಟು ಮೊಣ್ಣಪ್ಪಗೆ ರಾಷ್ಟ್ರೀಯ ಯುವರತ್ನ ಪ್ರಶಸ್ತಿ
ಮಡಿಕೇರಿ: ಮಾಯಮುಡಿಗ್ರಾಮದ ಆಪಟ್ಟೀರ ಎಸ್. ಟಾಟು ಮೊಣ್ಣಪ್ಪ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಯುವರತ್ನ ಪ್ರಶಸ್ತಿ ಸಂದಿದೆ.
ಬೆಂಗಳೂರಿನ ರಾಜ್ಯ ಯುವ ಮತ್ತು ಸಾಂಸ್ಕೃತಿಕ ಅಕಾಡೆಮಿಯ ವತಿಯಿಂದ ಯುವ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಾಧಕರಿಗೆ ನೀಡಲಾಗುವ ಈ ಪ್ರಶಸ್ತಿ ಪ್ರಸಕ್ತ ಸಾಲಿನಲ್ಲಿ ಟಾಟು ಮೊಣ್ಣಪ್ಪ ಅವರಿಗೆ ಲಭಿಸಿದೆ. ಅಕಾಡೆಮಿ ವತಿಯಿಂದ ಯುವ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದುಡಿದ 10 ಮಂದಿ ಸಾಧಕರಿಗೆ ಪ್ರತಿ ವರ್ಷ ಈ ಪ್ರಶಸ್ತಿ ನೀಡಲಾಗುತ್ತಿದೆ.
ಕಳೆದ 20 ವರ್ಷಗಳಿಂದ ಕೊಡಗಿನಲ್ಲಿ ಯುವ ಚಟುವಟಿಕೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಟಾಟು ಮೊಣ್ಣಪ್ಪ ಸಾಧನೆಯನ್ನು ಪರಿಗಣಿಸಿದ 12 ಪರಿಣತ ಜನರ ಆಯ್ಕೆ ಸಮಿತಿ ಪ್ರಶಸ್ತಿಗಾಗಿ ಇವರ ಹೆಸರನ್ನು ಅಂತಿಮಗೊಳಿಸಿದೆ.
ಫೆ.15 ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಸಮಾರಂಭದಲ್ಲಿ ಟಾಟು ಮೊಣ್ಣಪ್ಪ ಅವರು ರಾಷ್ಟ್ರೀಯ ಯುವರತ್ನ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.