ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೊಡಗು

ಬಿಜೆಪಿ ಬೆಂಬಲ: ಸಿಎಂ ಬಳಿಗೆ ನಿಯೋಗ

Parashurama
Updated On : 14 Feb 2013, 12:57 pm

ಕುಶಾಲನಗರ: ಕುಶಾಲನಗರ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ ನಗರ ಬಿಜೆಪಿ ಪ್ರಮುಖರ ನಿಯೋಗವೊಂದು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ನೂತನ ಕಾವೇರಿ ತಾಲೂಕು ರಚನೆಗೆ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿತು.
ಉಸ್ತುವಾರಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಅವರ ಮೂಲಕ ನಿಯೋಗ ಭೇಟಿ ಮಾಡಿ ನೂತನ ಕಾವೇರಿ ತಾಲೂಕು ಘೋಷಣೆ ಮಾಡುವಂತೆ ಮುಖ್ಯಮಂತ್ರಿಯನ್ನು ಕೋರಿದ್ದಾರೆ.
ನೂತನ ಕಾವೇರಿ ತಾಲೂಕು ರಚನೆ ಬಗ್ಗೆ ಸರ್ಕಾರದಲ್ಲಿ ಪ್ರಸ್ತಾವನೆ ಇಲ್ಲದಿರುವ ಬಗ್ಗೆ ನಿಯೋಗಕ್ಕೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಉತ್ತರ ನೀಡಿರುವುದಾಗಿ ತಿಳಿದುಬಂದಿದೆ. ನೂತನ ತಾಲೂಕು ರಚನೆ ಬಗ್ಗೆ ವರದಿ ಸಲ್ಲಿಸಲು ಎಚ್.ಡಿ. ಕುಮಾರ ಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸಂದರ್ಭ ರಚಿಸಿದ್ದ ಎಂ.ಬಿ. ಪ್ರಕಾಶ್ ನೇತೃತ್ವದ ಸಮಿತಿ ರಾಜ್ಯದ ವಿವಿಧೆಡೆ ತೆರಳಿ ಹೊಸ ತಾಲೂಕು ರಚನೆಗೆ ಶಿಫಾರಸು ಸಲ್ಲಿಸಿದ್ದು ಕುಶಾಲನಗರ ಕೇಂದ್ರವಾಗಿರುವ ಕಾವೇರಿ ತಾಲೂಕು ಬಗ್ಗೆ ಶಿಫಾರಸು ಮಾಡಿಲ್ಲ ಎನ್ನಲಾಗಿದೆ. ಈ ಬಗ್ಗೆ ಸಚಿವ ಎಂ.ಪಿ. ಪ್ಪಚ್ಚು ರಂಜನ್, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ನಗರ ಬಿಜೆಪಿ ಅಧ್ಯಕ್ಷ ಎಂ.ಎಂ. ಚರಣ್ 'ಕನ್ನಡಪ್ರಭ'ಕ್ಕೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments