ಕೊಡಗು

ಯುವಜನಪರ ಚಿಂತನಾ ವೇದಿಕೆ ಉದ್ಘಾಟನೆ

ಕುಶಾಲನಗರ: ಕುಶಾಲನಗರ ಯುವಜನಪರ ಚಿಂತನಾ ವೇದಿಕೆಯ ಉದ್ಘಾಟನಾ ಸಮಾರಂಭ ಮಹಾಲಕ್ಷ್ಮಿ ಹೋಟೆಲ್ ಸಭಾಂಗಣದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯರಾದ ಜಿ.ಎಲ್. ನಾಗರಾಜ್ ಮತ್ತು ಗೋವಿಂದರಾಜ್ ಪಾಲ್ಗೊಂಡಿದ್ದರು.
ಸಮಾರಂಭದಲ್ಲಿ ಚಿಂತನಾ ವೇದಿಕೆಯ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು. ಈ ಸಂದರ್ಭ ಯುವಜನಪರ ಚಿಂತನಾ ವೇದಿಕೆ ಅಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ವಿನೋದ್ ಕುಮಾರ್, ಸಂಚಾಲಕರಾದ ಸಿ.ನಾರಾಯಣ ಮತ್ತು ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳು: ಅಧ್ಯಕ್ಷರಾಗಿ ಪ್ರವೀಣ್ ಕುಮಾರ್, ಉಪಾಧ್ಯಕ್ಷರಾಗಿ ಶೇಖರ್, ಕಾರ್ಯದರ್ಶಿಯಾಗಿ ವಿನೋದ್ ಕುಮಾರ್, ಸಹ ಕಾರ್ಯದರ್ಶಿಯಾಗಿ ದೀಪಕ್, ಖಜಾಂಚಿಯಾಗಿ ಎಂ. ರವಿ, ಸಹ ಸಂಚಾಲಕರಾಗಿ ಸಿ.ಜೆ. ಚೆನ್ನಯ್ಯ, ಗೌರವಾಧ್ಯಕ್ಷರಾಗಿ ಕಿರಣ್ ಕುಮಾರ್ ಆಯ್ಕೆಯಾಗಿದ್ದಾರೆಂದು ವೇದಿಕೆಯ ಸಂಚಾಲಕ ಸಿ. ನಾರಾಯಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಕರಾವಳಿಯಿಲ್ಲದೆ ಕರ್ನಾಟಕವಿಲ್ಲ, ಮಂಗಳೂರು ನಮ್ಮ ರಾಜ್ಯ ಹೆಮ್ಮೆ: ಸಿಎಂ ಡಿಕೆ ಶಿವಕುಮಾರ್

ಸ್ಟಿಂಗ್ ವಿಡಿಯೋ ಕೇಸ್‌: ತನಿಖೆಯಲ್ಲಿ ಯಾರ ಬಂಧನವಾಗಿದೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್