ಲಾರಿ ಡಿಕ್ಕಿ: ಇಬ್ಬರು ಮಕ್ಕಳ ಸಾವು, ದಂಪತಿ ಗಂಭೀರ
ಕುಶಾಲನಗರ: ಇಲ್ಲಿಗೆ ಸಮೀಪ ಕೊಪ್ಪ ಬಿ.ಎಂ. ರಸ್ತೆಯಲ್ಲಿ ಭಾನುವಾರ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟು ಪೋಷಕರು ತೀವ್ರ ಗಾಯಗೊಂಡ ಘಟನೆ ನಡೆದಿದೆ. ಹುಣಸೂರು ನಿವಾಸಿಗಳಾದ ಜಬಿವುಲ್ಲಾ ಖಾನ್ ತನ್ನ ಕುಟುಂಬ ಸದಸ್ಯರೊಂದಿಗೆ ದ್ವಿಚಕ್ರವಾಹನದಲ್ಲಿ ಕೊಪ್ಪ ಕಡೆಗೆ ಬರುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದ ಪರಿಣಾಮ ಖಾನ್ ಅವರ ಮಕ್ಕಳಾದ ಶಿಫಾ (4) ಮತ್ತು ನಿಹಾ (2) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಖಾನ್ ಮತ್ತು ಅವರ ಪತ್ನಿ ಅಸ್ಮಾಭಾನು ತೀವ್ರ ಗಾಯಗೊಂಡು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.