ಏ. 11, 12ರಂದು ರಾಜ್ಯಮಟ್ಟದ ವಾಲಿಬಾಲ್
ಮಡಿಕೇರಿ: ಲಕ್ಕಿ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಏ. 11 ಮತ್ತು 12 ರಂದು ಕುಂಜಿಲ ಕಕ್ಕಬ್ಬೆಯ ಕೆ.ಪಿ. ಬಾಣೆ ಶಾಲಾ ಮೈದಾನದಲ್ಲಿ ಹೊನಲು ಬೆಳಕಿನ ಆಹ್ವಾನಿತ ಅಂತರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕ್ಲಬ್ ಅಧ್ಯಕ್ಷ ಎಂ.ಎ. ಶೌಕತ್ ಆಲಿ, ಪಂದ್ಯಾವಳಿ ವಿಜೇತ ತಂಡಕ್ಕೆ ರು. 50 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರು. 30 ಸಾವಿರ ನಗದು ಮತ್ತು ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಪಂದ್ಯಾಟಗಳು ಸಂಜೆ 5 ಗಂಟೆಗೆ ಆರಂಭಗೊಳ್ಳಲಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕ್ಲಬ್ ಉಪಾಧ್ಯಕ್ಷ ಮೊಹಮ್ಮದ್, ಸದಸ್ಯರಾದ ಕೆ.ಎ. ಇಬ್ರಾಹಿಂ ಮತ್ತು ನಾಸಿರ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.