ನಾಳೆಯಿಂದ ಮಾರಾಟ ಮೇಳ
ಮಡಿಕೇರಿ: ಜವಳಿ ಮಂತ್ರಾಲಯ, ಜವಳಿ ಅಭಿವೃದ್ಧಿ ನಿಗಮ ಸಂಯುಕ್ತ ಆಶ್ರಯದಲ್ಲಿ ಜಿ.ಪಂ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಮಾ.18ರಿಂದ 23ರವರೆಗೆ ಹೋಳಿ ಹಬ್ಬದ ಅಂಗವಾಗಿ 'ಕಾವೇರಿ ವಸ್ತ್ರಸಿರಿ' ಜಿಲ್ಲಾ ಮಟ್ಟದ ಕೈಮಗ್ಗ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
ಮಾ.18ರಂದು ಮಧ್ಯಾಹ್ನ 3 ಗಂಟೆಗೆ ಮಡಿಕೇರಿ ನಗರ ಪೊಲೀಸ್ ಠಾಣೆ ಹಿಂಭಾಗದ ಕೆಳಗಿನ ಕೊಡವ ಸಮಾಜದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಎಂ.ಪಿ. ಅಪ್ಪಚ್ಚುರಂಜನ್, ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಜಿ.ಪಂ. ಅಧ್ಯಕ್ಷ ಬಿ.ಶಿವಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.