ಕೊಡಗು

ಬೇಸಿಗೆಗೆ ಹಾರಂಗಿ ನೀರಿನ ಪ್ರಮಾಣ ಕಾಯ್ದುಕೊಳ್ಳಲು ಕ್ರಮಕ್ಕೆ ಆಗ್ರಹ

ಕುಶಾಲನಗರ: ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಬೇಸಿಗೆ ಬೆಳೆಗೆ ನೀರು ಹರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಜಲಾಶಯದಲ್ಲಿ 4 ಟಿಎಂಸಿ ನೀರಿಯ ಪ್ರಮಾಣವನ್ನು ಕಾಯ್ದುಕೊಳ್ಳುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಹಾರಂಗಿ ಯೋಜನಾ ವೃತ್ತದ ನೀರು ಬಳಕೆದಾರರ ಸಂಘದ ಮಹಾಮಂಡಳ ಅಧ್ಯಕ್ಷ ಎನ್.ಸಿ.ಚೌಡೇಗೌಡ ಆಗ್ರಹಿಸಿದ್ದಾರೆ.  ಅವರು ಹಾರಂಗಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಹುಣಸೂರು ಮತ್ತು ಪಿರಿಯಾಪಟ್ಟಣ ತಾಲೂಕು ವ್ಯಾಪ್ತಿಯ ಕೆರೆ ಕಟ್ಟೆಗಳನ್ನು ತುಂಬಿಸುವ ಸಲುವಾಗಿ ಈಗಾಗಲೇ ಜಲಾಶಯದಿಂದ 500 ಕ್ಯುಸೆಕ್ ನೀರನ್ನು ಕಾಲುವೆಗಳ ಮೂಲಕ ಹೊರಬಿಡಲಾಗಿದೆ ಎಂದ ಅವರು ಇನ್ನು 10 ದಿನಗಳಲ್ಲಿ ಈ ವ್ಯಾಪ್ತಿಯ ಕರೆಕಟ್ಟೆಗಳು ತುಂಬಿಕೊಳ್ಳಲಿವೆ ಎಂದಿದ್ದಾರೆ. ರೈತರು ಎಲ್ಲವನ್ನೂ ಸರ್ಕಾರದಿಂದಲೇ ನಿರೀಕ್ಷೆ ಮಾಡದೆ ನೀರಿನ ಸದ್ಬಳಕೆ ಬಗ್ಗೆ ಎಚ್ಚರ ವಹಿಸುವುದು ಅವಶ್ಯಕವಾಗಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭ ಮಹಾಮಂಡಳದ ಉಪಾಧ್ಯಕ್ಷ ದೇವರಾಜ್, ಇತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?