ಕೊಡಗು

ರು. 4 ಲಕ್ಷ ಮೌಲ್ಯದ ಶ್ರೀಗಂಧ ವಶ

ಗೋಣಿಕೊಪ್ಪಲು: ಇಲ್ಲಿಗೆ ಸಮೀಪ ತೂಚಮಕೇರಿಯ ಮಾಚಿಮಾಡ ನರೇಂದ್ರ ಎಂಬವರ ಕಾಫಿ ತೋಟದಲ್ಲಿ ಗೊಬ್ಬರ ಚೀಲದಲ್ಲಿ ಬಚ್ಚಿಡಲಾಗಿದ್ದ ಸುಮಾರು ರು. 4 ಲಕ್ಷ ಮೌಲ್ಯದ ಗಂಧದ ತುಂಡುಗಳನ್ನು ಬುಧವಾರ ಪೊನ್ನಂಪೇಟೆ ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ.
ಅರಣ್ಯ ಇಲಾಖೆಗೆ ದೊರೆತ ಖಚಿತ ಮಾಹಿತಿ ಮೇರೆ ಪೊನ್ನಂಪೇಟೆ ವಲಯಾರಣ್ಯಾಧಿಕಾರಿ ಕೃಷ್ಣಯ್ಯ ಹಾಗೂ ಸಿಬ್ಬಂದಿತೂಚಮಕೇರಿ ಕಾಫಿ ತೋಟದಿಂದ ವಶಪಡಿಸಿದ್ದಾರೆ.
 ಬೇರೆಡೆ ಗಂಧದ ಮರ ಕಡಿದು ತುಂಡುಗಳನ್ನಾಗಿ ಮಾರ್ಪಡಿಸಿ ತಂದಿರಬಹುದು ಎಂದು ಶಂಕಿಸಲಾಗಿದೆ. ಪ್ರಕರಣ ದಾಖಲಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಹಾಕಿಪಟು ಸುನಿಲ್‌ಗೆ ಸನ್ಮಾನ ಇಂದು
ಸೋಮವಾರಪೇಟೆ: ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಭಾರತ ತಂಡ ಹಾಕಿಯಲ್ಲಿ ಬೆಳ್ಳಿ ಪದಕ ಪಡೆದಿದ್ದಲ್ಲದೆ ತಂಡದಲ್ಲಿ ಪ್ರಮುಖ ಆಟಗಾರನಾಗಿ ಮಿಂಚಿದ್ದ ಸೋಮವಾರಪೇಟೆ ಮೂಲದ ಎಸ್.ವಿ.ಸುನಿಲ್‌ಗೆ ಆ.7ರಂದು ಪಟ್ಟಣದಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿದೆ. ಇಲ್ಲಿನ ಡಾಲ್ಫೀನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಗರದ ಪತ್ರಿಕಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿರುವ ಸಮಾರಂಭದಲ್ಲಿ ಎಸ್.ವಿ. ಸುನಿಲ್ ಅವರನ್ನು ಸನ್ಮಾನಿಸಲಾಗುವುದು ಎಂದು ಕ್ಲಬ್ ಅಧ್ಯಕ್ಷ ಅಶೋಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾ

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸಭೆಯಲ್ಲಿ ಪ್ರತಿಭಟನೆ, ಗದ್ದಲ, ಕಲಾಪಕ್ಕೆ ಅಡ್ಡಿ!

'ಸ್ವಲ್ಪ ತಾಳ್ಮೆಯಿಂದ ಕಾಯಿರಿ' ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!

ಆಪ್ ಕಿ ಅದಾಲತ್‌ನಲ್ಲಿ 'ಗಡ್ಡದ ಹಿಂದಿನ ಕಥೆ ಬಿಚ್ಚಿಟ್ಟ ಸೂಪರ್ ಸ್ಟಾರ್ ಯಶ್! Video

BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?