ಮೂರ್ನಾಡು: ಸರ್ಕಾರದ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾಂತೂರು- ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುದಿಯೊಕ್ಕಡ ಪೊನ್ನು ಮುತ್ತಪ್ಪ ಹೇಳಿದರು. ಅವರು ಇಲ್ಲಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಿ ಮಾತನಾಡಿದರು. ವಿದ್ಯಾರ್ಥಿ ನಿಲಯದ 50 ಮಂದಿ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ವಿತರಿಸಲಾಯಿತು. ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಎನ್.ಎನ್. ವೀರಣ್ಣ ಹಾಜರಿದ್ದರು.