ಕೊಡಗು

ಜಾರ್ಜ್‌ಗೆ ಪ್ರತಿಭಟನೆ ಸ್ವಾಗತ

ಮಡಿಕೇರಿ: ರಾಜ್ಯ ಗೃಹಸಚಿವ ಕೆ.ಜೆ. ಜಾರ್ಜ್ ಮಡಿಕೇರಿಗೆ ಬಂದ ಸಂದರ್ಭ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಘೋಷಣೆಗಳನ್ನು ಕೂಗುವ ಮೂಲಕ ಸಚಿವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ಜಾರ್ಜ್ ಅವರಿಗೆ ಸಚಿವ ಸ್ಥಾನದಲ್ಲಿರಲು ನೈತಿಕ ಹಕ್ಕಿಲ್ಲ ಎಂದೂ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದರು.  
ಜಿಲ್ಲಾಧಿಕಾರಿ ಕಚೇರಿಯಲ್ಲಿ ಉದ್ದೇಶಿತ ಸಭೆಗೆ ಆಗಮಿಸಿದ ಜಾರ್ಜ್ ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಿದ್ದಂತೆಯೇ ಕಚೇರಿ ಮುಂಬದಿ ಸೇರಿದ್ದ ಕಾರ್ಯಕರ್ತರು ಜಾರ್ಜ್ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು. ಕಾರ್ಯಕರ್ತರು ಧಿಕ್ಕಾರ ಕೂಗುತ್ತಿದ್ದಂತೆಯೇ ಸಚಿವರು ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣವನ್ನು ತರಾತುರಿಯಿಂದ ಪ್ರವೇಶಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಪ್ರಮುಖರು, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಕೊಡಗು ಮೂಲದ ತರುಣಿಯ ಮೇಲೆ ಕಾಮುಕರ ತಂಡ ಅತ್ಯಾಚಾರ ಯತ್ನ ನಡೆಸಿದ್ದು ಕರ್ನಾಟಕದ ಸುಸಂಸ್ಕೃತ ನಾಗರಿಕರು ತಲೆತಗ್ಗಿಸುವ ಕೃತ್ಯ. ಇದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದರು. ರಾಜ್ಯದಲ್ಲಿ ಅತ್ಯಾಚಾರಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಇದನ್ನು ತಡೆಗಟ್ಟುವಲ್ಲಿ ಗೃಹಸಚಿವರು ವಿಫಲರಾಗಿದ್ದಾರೆ. ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ, ಜಿಪಂ ಅಧ್ಯಕ್ಷ ಎಸ್.ಎನ್. ರಾಜಾರಾವ್, ಉಪಾಧ್ಯಕ್ಷೆ ಬಿದ್ದಂಡ ಉಷಾದೇವಮ್ಮ, ಯುವಮೋರ್ಚಾ ಜಿಲ್ಲಾ ಅಧ್ಯಕ್ಷ ಬಿ.ಬಿ. ಭಾರತೀಶ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಕಾಂತಿ ಬೆಳ್ಯಪ್ಪ, ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಚೈನಿ, ನಗರಸಭಾ ಸದಸ್ಯರಾದ ಪಿ.ಟಿ. ಉಣ್ಣಿಕೃಷ್ಣ, ಕೆ.ಎಸ್. ರಮೇಶ್, ಅನಿತಾ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ತಳೂರು ಕಿಶೋರ್ ಕುಮಾರ್, ಜಿಪಂ ಸದಸ್ಯರಾದ ಬೀನಾ ಬೊಳ್ಳಮ್ಮ, ಸುಲೋಚನ, ನಾಪಂಡ ರವಿಕಾಳಪ್ಪ, ಮನು ಮಂಜುನಾಥ್ ಇದ್ದರು.
ಮಳೆ ನಡುವೇ ಬಿಜೆಪಿ ಕಾರ್ಯಕರ್ತರು ಜಾರ್ಜ್ ವಿರುದ್ಧ ಪ್ರತಿಭಟನೆ ಕೈಗೊಂಡು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!