ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಆರೋಗ್ಯ ನಿರೀಕ್ಷಕಿ ಆತ್ಮಹತ್ಯೆ ಯತ್ನ

Srinivasa Murthy VN
Updated On : 3 Aug 2013, 12:19 pm

ಶಿಡ್ಲಘಟ್ಟ:  ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಅಮಾನತು ಶಿಕ್ಷೆಗೊಳಗಾದ ಪುರಸಭೆ ಆರೋಗ್ಯ ನಿರೀಕ್ಷಕಿ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ.ಸ್ಥಳೀಯ ಪುರಸಭೆ ಆರೋಗ್ಯ ನಿರೀಕ್ಷಕಿ ಮರಿಯಾ ರೋಝ್ವುಜರನ್ ಆತ್ಮಹತ್ಯಗೆ ಯತ್ನಿಸಿದವರು.  ಚಿಕ್ಕಬಳ್ಳಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಟ್ಟಣದಲ್ಲಿ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ. ಪುರಸಭೆ ಆರೋಗ್ಯ ನಿರೀಕ್ಷಕಿ ಮರಿಯಾ ರೋಝ್ವುಜರನ್ ಅವರನ್ನು ಜಿಲ್ಲಾಧಿಕಾರಿ ಡಾ.ವಿಶಾಲ್ ಅಮಾನತುಗೊಳಿಸಿದ ಆದೇಶ ಹೊರಡಿಸಿದರಿಂದ ಮನ ನೊಂದ ಆರೋಗ್ಯ ನಿರೀಕ್ಷಕಿ ನಿದ್ದೆ ಮಾತ್ರೆ ಸೇವೆಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಪುರಸಭೆ ವ್ಯಾಪ್ತಿಯಲ್ಲಿ ವಿಶೇಷವಾಗಿ ಪಟ್ಟಣದ 12 ವಾರ್ಡ್‌ಗಳಲ್ಲಿ ಸ್ವಚ್ಛತೆ ಹೆಸರಿನಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಇತ್ತೀಚಿಗೆ ಪುರಸಭೆ ಸದಸ್ಯರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

'ಶಿಕ್ಷಕರಿಗೆ ಸಮಾಜಮುಖಿ ಧೋರಣೆ ಅಗತ್ಯ'
ಮಾಲೂರು: ಶಿಕ್ಷಕರು ಸಮಾಜಮುಖಿ ಧೋರಣೆ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಪ್ರಜೆಗಳನ್ನು ಸೃಷ್ಟಿಸಲು ಸಾಧ್ಯ ಎಂದು ಚುಟುಕ ಸಾಹಿತ್ಯ ಪರಿಷತ್ ಅಧ್ಯಕ್ಷ ಕುಂ.ಚಂದ್ರಪ್ಪ ಹೇಳಿದರು.
ಅವರು ತಾ.ಚು.ಸಾ.ಪರಿಷತ್ ವತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಕಿರಿಯ ಬಾಲಕರ ಶಾಲೆಯಲ್ಲಿ ಬುಧವಾರ ಆಯೋಜಿಸಲಾಗಿದ್ದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ಬಿ.ಎಂ.ಹನುಮಂತಪ್ಪರವರ ನಿವೃತ್ತಿ ಸಾಂದರ್ಭಿಕ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಸಮಾಜದ ಇತರೆ ವೃತ್ತಿಪರರಗಿಂತ ಭಿನ್ನವಾಗಿ ಶಿಕ್ಷಕರು ತಮ್ಮ ವೃತ್ತಿ ಪ್ರಜ್ಞೆ, ಕರ್ತವ್ಯ ನಿಷ್ಠೆ ಹಾಗೂ ಮೌಲ್ಯಗಳನ್ನು ಎತ್ತಿ ಹಿಡಿಯುವ ಕೆಲಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಸಾಪ ಜಿಲ್ಲಾ ಕಾರ್ಯದರ್ಶಿ ಎ.ಅಶ್ವಥ್ ರೆಡ್ಡಿ ಮಾತನಾಡುತ್ತ ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ತಮ್ಮ ಕರ್ತವ್ಯಕ್ಕಿಂತ ಹೆಚ್ಚಾಗಿ ಬೇರೆಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಇದು ಸಮಾಜಕ್ಕೆ ಅಪಾಯಕಾರಿ ಎಂದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಮುಖ್ಯೋಪಾಧ್ಯಾಯ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಬಿ.ಎಂ.ಹನುಮಂತಪ್ಪ ರವರು, ನಾನು ಶಿಕ್ಷಕ ವೃತ್ತಿಗಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ಅಧಿಕಾರಿ ಹುದ್ದೆಯನ್ನು ಬಿಟ್ಟು ಬಂದೆ ಎಂದರು.
 ಪ್ಲಾಸ್ಟಿಕ್ ನಿರ್ಮೂಲನ ಸಮಿತಿ ಅದ್ಯಕ್ಷ ಮುನಿಸ್ನಾಮಿ, ಸಾಹಿತಿ ಕೆ.ಮುನಕೃಷ್ಣಪ್ಪ, ಚು.ಸಾ.ಪ.ಉಪಾಧ್ಯಕ್ಷ ಆನೇಪುರ ದೇವರಾಜ್, ಕವಿ ನಾ.ಮುನಿರಾಜು,ಶಾಂತಮ್ಮ, ಶ್ರೀನಿಧಿ ಶ್ರೀನಿವಾಸ್  ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹಿರಿಯ ಶಿಕ್ಷಕಿ ಪುಪ್ಬ ಗಜಾನನ ಭಟ್ ರವರನ್ನು ಇದೇ ಸಂದರ್ಭದಲ್ಲಿ ತಾಲೂಕು ಚುಟುಕ ಸಾಹಿತ್ಯ ಪರಿಷತ್ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement