ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಿ

Srinivasa Murthy VN
Updated On : 5 Aug 2013, 12:45 pm

ಚಿಂತಾಮಣಿ: ವಾಲ್ಮೀಕಿ ಸಮಾಜದ ಬಡ ಮಕ್ಕಳಿಗೆ ಮುಂದಿನ ವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ವಾಲ್ಮೀಕಿ ಸಮಾಜದ ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮ ಯಶಸ್ವಿಯಾಗಲು ಸಹಕಾರ ನೀಡಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಚುನಾಯಿತರಾದ ಎನ್. ವೆಂಕಟಾಚಲಪತಿ ಕರೆ ನೀಡಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರದಂದು ತಾಲೂಕು ವಾಲ್ಮೀಕಿ ಸರ್ಕಾರಿ ನೌಕರರ ಸಂಘ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಶಾಲಾ ಕಾಲೇಜು ಬಡವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತೀಭಾ ಪುರಸ್ಕಾರ ಕಾರ್ಯಕ್ರಮಕ್ಕೆ ವಾಲ್ಮೀಕಿ ಸಮಾಜದ ಸಂಘ ಸಂಸ್ಥೆಗಳು ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಯಾಗಲು ಎನ್.ವೆಂಕಟಾಚಲಪತಿ ಕೋರಿದರು.
ಸನ್ಮಾನ: ಶಿಕ್ಷಕರು ತನ್ನನ್ನು ಬಹುಮತ ನೀಡಿ ಸರ್ಕಾರಿ ನೌಕರರ ಸಂಘದ ವತಿಯಿಂದ ರಾಜ್ಯ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಲು ಸಹಕರಿಸಿದ ಪ್ರತಿಯೊಬ್ಬ ಶಿಕ್ಷಕರಿಗೂ ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಅಭಿನಂದನೆಗಳು ಸಲ್ಲಿಸಿದರು. ನಂತರ ಮಾತನಾಡಿದ ತಾಲೂಕು ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಹೆಚ್.ಮಂಜುನಾಥ್ ಸನ್ಮಾನ ನನಗೆ ಮಾತ್ರವಲ್ಲ ತಾಲೂಕಿನ ವ್ಯಾಪ್ತಿಯಲ್ಲಿ ನನ್ನನ್ನು ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿದ ಪ್ರತಿಯೊಬ್ಬರಿಗೂ ಸನ್ಮಾನಿಸಿದಂತೆ ಎಂದು ನುಡಿದರು.
ಗ್ರಾಮೀಣ ಪ್ರದೇಶದಿಂದ ಪಟ್ಟಣ ಪ್ರದೇಶದವರೆಗೂ ಪ್ರತಿಭಾವಂತ ವಾಲ್ಮೀಕಿ ಸಮುದಾಯದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾಗಿ ಚುನಾಯಿತರಾದ ಶಿಕ್ಷಕ ಎನ್. ವೆಂಕಟಾಚಲಪತಿ ಮತ್ತು ತಾಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ನೂತನ ಅಧ್ಯಕ್ಷ ಬಿ.ಹೆಚ್.ಮಂಜುನಾಥ್ ಅವರನ್ನು ತಾಲೂಕು ವಾಲ್ಮೀಕಿ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಡಿ.ಸಾದಪ್ಪ, ವಾಲ್ಮೀಕಿ ಸಮಾಜದ ಹಿರಿಯ ಮುಖಂಡ ಚನ್ನರಾಯಪ್ಪ,ಶ್ರೀನಿವಾಸಪುರ ಹಾಲು ಒಕ್ಕೂಟದ ವ್ಯವಸ್ಥಾಪಕ ಎನ್.ನಾಗರಾಜ್, ಡಿ.ರಾಜಣ್ಣ ,ಚಂದ್ರಶೇಖರ್, ಜಿ.ಮಂಜುನಾಥ್, ಶಂಕರಪ್ಪ , ಆನಂದ್, ಆದಿನಾರಾಯಣ, ಮುನಿವೀರಪ್ಪ , ನಾರಾಯಣಸ್ವಾಮಿ, ನಿರಂಜನ್, ಶ್ರೀರಾಮ್, ನೂರಾರು ನೌಕರ ಮಿತ್ರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement