ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ನೋಟ್ಬುಕ್ ವಿತರಣೆ

Rashmi Kasaragodu
Updated On : 7 Aug 2013, 1:12 am

ಕ.ಪ್ರ.ವಾರ್ತೆ ಟಿ ಚಿಂತಾಮಣಿ ಟಿ ಆ.6
ತಾಲೂಕಿನ ಅಂಬಾಜಿದುರ್ಗ ಹೋಬಳಿ ಅಮಿಟಗಾನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಬಿಂಗಾನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಲಾಯಿತು.
ಸರ್ಕಾರಿ ನೌಕರರ ಗೃಹ ನಿರ್ಮಾಣ ಮಂಡಳಿ ಮಾಜಿ ಅಧ್ಯಕ್ಷ ಕೆ.ಸಿ.ಶಿವಶಂಕರ್ ಪುಸ್ತಕಗಳನ್ನು ವಿತರಿಸಿ ಮಾತನಾಡಿ, ಶಿಕ್ಷಣ ಮಕ್ಕಳ ಹಕ್ಕಾಗಿದೆ. ಇದರಿಂದ ಯಾವ ಮಗು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಆಶಯ ವ್ಯಕ್ತಪಡಿಸಿದರು.
ಸಮೂಹ ಸಂಪನ್ಮೂಲ ವ್ಯಕ್ತಿ ಪ್ರಭಾಕರ್ ಮಾತನಾಡಿ, ಈ ಶಾಲೆ ವಿದ್ಯಾರ್ಥಿಗಳು ಸಮುದಾಯ ಹಾಗೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಶಿಕ್ಷಕರ ಪರಿಶ್ರಮ ಶ್ಲಾಘನೀಯ ಎಂದು ಬಣ್ಣಿಸಿದರು.
ಮುಖ್ಯಶಿಕ್ಷಕ ವಿ.ನಲ್ಲಪ್ಪ ಮಾತನಾಡಿ, ಶಿವಶಂಕರ್ ಸೇವಾ ಮನೋಭಾವನೆ ಪ್ರಶಂಸಿಸಿ ಸ್ವಾಗತಿಸಿದರು. ಸಹ ಶಿಕ್ಷಕ ಎಂ.ಮಂಜುನಾಥ್ ನಿರೂಪಿಸಿ ವಂದಿಸಿದರು.
ಈ ಸಂದರ್ಭ ಮಕ್ಕಳು ಪೋಷಕರು ಮತ್ತು ಊರಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement