ಬಸ್ಗೆ ಕಲ್ಲು: 10000 ನಷ್ಟ
ಚಿಂತಾಮಣಿ: ತಾಲೂಕಿನ ಪಾಲೇಪಲ್ಲಿ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ನಿಲ್ಲಿಸಲಿಲ್ಲ ಎಂದು ಕೆಲವು ಕಿಡಿಗೇಡಿಗಳು ಬಸ್ಸಿಗೆ ಕಲ್ಲು ತೂರಾಟ ನಡೆಸಿದ ಪರಿಣಾಮ ಬಸ್ಸಿನ ಹಿಂಬದಿ ಗಾಜು ಪುಡಿಪುಡಿಯಾಗಿ ಸಾವಿರಾರು ರು. ನಷ್ಟ ಉಂಟಾಗಿದೆ ಎಂದು ಬಸ್ಸಿನ ಚಾಲಕ ಮತ್ತು ನಿರ್ವಾಹಕ ಮಂಗಳವಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಚಿಂತಾಮಣಿಯಿಂದ ಜಲದೇನಹಳ್ಳಿ ಮಾರ್ಗವಾಗಿ ಮಂಗಳವಾರ ಬೆಳಿಗ್ಗೆ ಚಿಂತಾಮಣಿ ಕಡೆಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಪಾಲೇಪಲ್ಲಿ ಬಳಿ ಹಲವಾರು ವಿದ್ಯಾರ್ಥಿಗಳು ಬಸ್ಸಿಗಾಗಿ ಕಾಯುತ್ತಿದ್ದರು. ಆದರೆ, ಹಲವರು ಬಸ್ ನಿಲ್ಲಿಸಲಿಲ್ಲ ಎಂದು ಕುಪಿತಗೊಂಡು ಕಲ್ಲು ತೂರಾಟ ನಡೆಸಿದರು. ಪರಿಣಾಮ 10000 ಮೌಲ್ಯ ಬಸ್ನ ಹಿಂಬದಿ ಗ್ಲಾಸ್ ಪುಡಿಪುಡಿಯಾಗಿದೆ. ಇದರಿಂದ ಸಂಸ್ಥೆಗೆ ನಷ್ಟ ಉಂಟು ಮಾಡಿದ್ದಾರೆಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕೇಸ್ ದಾಖಲಿಸಿ ವಿಚಾರಣೆ ನಡೆಸುತ್ತಿದ್ದಾರೆ.