ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಮಂಜುನಾಥ್ ಪುನರಾಯ್ಕೆ

Rashmi Kasaragodu
Updated On : 7 Aug 2013, 1:12 am

ಕೋಲಾರ: ಜಿಲ್ಲಾ ಸರ್ಕಾರಿ ನೌಕರರ ಸಂಘದ 2013-14ರ ಅವಧಿಗೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಕೆ.ಎನ್.ಮಂಜುನಾಥ್ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಜಿಲ್ಲಾ ಶಾಖೆಗೆ ಗೌರವಾಧ್ಯಕ್ಷರಾಗಿ ಎನ್. ರವಿಚಂದ್ರನ್, ಅಧ್ಯಕ್ಷರಾಗಿ ಕೆ.ಎನ್. ಮಂಜುನಾಥ, ಕೆ.ಬಿ. ನಾಗರಾಜ್ ಕಾರ್ಯದರ್ಶಿ, ಎನ್. ರಂಗಯ್ಯ-ಖಜಾಂಜಿಯಾಗಿ ಅವಿರೋದವಾಗಿ ಆಯ್ಕೆಯಾಗಿದ್ದಾರೆ.
ರಾಜ್ಯ ಪರಿಷತ್ಗೆ ಎಂ. ನಾಗರಾಜ್ ಸಹ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ. ಮಾಜಿ ಗೌರವಾಧ್ಯಕ್ಷರಾದ ಕೆ.ಎಸ್. ಶ್ರೀನಿವಾಸಗೌಡ, ಉಪಾಧ್ಯಕ್ಷ ಅಂಚೆ ಅಶ್ವಥ್ ಮತ್ತು ಎನ್.ರಂಗಪ್ಪ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ್ದಾರೆ.
ಇಂದು ತರಬೇತಿ
ಕೋಲಾರ: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ, ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಸಹಕಾರ ಸಂಘಗಳಿಗೆ ನಡೆಯುವ ಚುನಾವಣೆಗೆ ಅಧಿಕಾರಿಗಳಾಗಿ ನೇಮಕವಾಗಿರುವವರಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರವನ್ನು ಆ.7 ರಂದು ಬುಧವಾರ ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಸಹಕಾರ ಯೂನಿಯನ್ ಮಾಜಿ ಅಧ್ಯಕ್ಷ, ಹಾಲಿ ನಿರ್ದೇಶಕ ಬ್ಯಾಲಹಳ್ಳಿ ಎಂ. ಗೋವಿಂದಗೌಡ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಕೋಲಾರ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಎನ್. ಕೃಷ್ಣಾರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement