ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ರಾಷ್ಟ್ರೀಯ ಕ್ರೀಡಾಕೂಟಕ್ಕೆ ಭರತ್ ಆಯ್ಕೆ

Rashmi Kasaragodu
Updated On : 7 Aug 2013, 1:13 am

ಚಿಕ್ಕಬಳ್ಳಾಪುರ:  ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ 25ನೇ ರಾಜ್ಯಮಟ್ಟದ ಜೂನಿಯರ್ ಕ್ರೀಡಾಕೂಟದಲ್ಲಿ ಚಿಕ್ಕಬಳ್ಳಾಪುರದ ಭರತಕುಮಾರ್ 14 ವರ್ಷದ ಬಾಲಕರ ವಿಭಾಗದ ಹೈಜಂಪ್ನಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ಪಡೆದಿದ್ದಾರೆ. ಅಲ್ಲದೆ, ಅ.21 ರಿಂದ 25 ರವರೆಗೆ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರಿಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಅ.3 ರಿಂದ ಅ.5 ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ 25ನೇ ರಾಜ್ಯಮಟ್ಟದ ಜೂನಿಯರ್ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು. ರಾಜ್ಯದ ವಿವಿಧೆಡೆ ಜಿಲ್ಲೆಗಳಿಂದ ಸುಮಾರು 1200ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಿದ್ದರು.
ಕ್ರೀಡಾಕೂಟದಲ್ಲಿ ನಡೆದ 14 ವರ್ಷದ ಬಾಲಕರ ವಿಭಾಗದ ಹೈಜಂಪ್ ಸ್ಪರ್ಧೆಯಲ್ಲಿ ಭಾಗವಹಿಸಿದ ಭರತ್ಕುಮಾರ್ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕ ತನ್ನದಾಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೀರ್ತಿ ತಂದಿದ್ದಾನೆ.
ಕ್ರೀಡಾಪಟುವಿನ ಸಾಧನೆಗೆ ತರಬೇತುದಾರ, ಅಂತರರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಮತ್ತು ಕೆ.ವಿ. ಟ್ರಸ್ಟ್ನ ಅಧ್ಯಕ್ಷರು ಮತ್ತು ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನ ಅಧ್ಯಕ್ಷ ಕೆ.ವಿ.ನವೀನಕಿರಣ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement