ಇಂದು ಶಾಲಾ ಮಕ್ಕಳಿಂದ ಚುಟುಕು ಕವಿಗೋಷ್ಠಿ
ಕೋಲಾರ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವತಿಯಿಂದ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಶಾಲಾ ಅಂಗಳದಲ್ಲಿ ಚುಟುಕು ಸಂಭ್ರಮ ಹಾಗೂ ಶಾಲಾ ಮಕ್ಕಳಿಂದ ಚುಟುಕು ಕವಿಗೋಷ್ಠಿಯನ್ನು ಆ.8ರಂದು ನಗರದ ಆದರ್ಶ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ. ಶಿಕ್ಷಣ ಇಲಾಖೆಯ ಪರಿವೀಕ್ಷಕ ಹಾಗೂ ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷರಾದ ಸಿ.ಅಶೋಕ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೋಲಾರ ವಿಭಾಗದ ನಿಯಂತ್ರಣಾಧಿಕಾರಿ ಎಂ. ರಮೇಶ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಅರವಿಂದಕಟ್ಟಿ, ಗೌರವಾಧ್ಯಕ್ಷ ಡಾ. ಕೆ.ಎಂ.ಜೆ ಮೌನಿ, ಆದರ್ಶಕಾಲೇಜಿನ ಪ್ರಾಂಶುಪಾಲ ಎಸ್.ಕೆ. ಕಲಾಂ ಭಾಗವಹಿಸುವರು. ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಮಾಜಿ ಯೋಧರ ಸಂಘದ ಅಧ್ಯಕ್ಷರಾದ ಹೆಚ್. ಜಗನ್ನಾಥನ್ ಅವರನ್ನು ಸನ್ಮಾನಿಸಲಾಗುವುದೆಂದು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪಿ. ನಾರಾಯಣಪ್ಪ ತಿಳಿಸಿದ್ದಾರೆ.