ಪತ್ನಿ ಬಂಧನ
ಕೋಲಾರ: ಶಿಡ್ಲಘಟ್ಟ ಉಪ ಖಜಾನೆಯಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿದ್ದ ಕೋಲಾರದ ನಿವಾಸಿ ರವಿ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಮೃತನ ಪತ್ನಿ ಸುಕನ್ಯ ಅವರನ್ನು ಬುಧವಾರ ಸಂಜೆ ಬಂಧಿಸಿದ್ದಾರೆ. ಮೃತರು ತಮ್ಮ ಸಾವಿಗೆ ಪತ್ನಿಯೇ ಕಾರಣ ಎಂದು ಪತ್ರ ಬರೆದಿಟ್ಟಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿ ಕ್ರಮ ಕೈಗೊಂಡಿದ್ದಾರೆ. ಆರೋಪಿ ಸುಕನ್ಯ ಪತಿಯ ಅಂತ್ಯಕ್ರಿಯೆಗೆ ಹೋಗಿ ಬರುವುದಕ್ಕೆ ಅವಕಾಶ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದರಿಂದ ಬುಧವಾರ ಚಿಂತಾಮಣಿಯ ಸೀಗೇಹಳ್ಳಿಗೆ ಪೊಲೀಸ್ ಬಂದೋಬಸ್ತಿನಲ್ಲಿ ಕಳುಹಿಸಿ ವಾಪಸ್ ಬಂದ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಡಿವೈಎಸ್ಪಿ ಶ್ರೀಹರಿ ಬರಗೂರು ತಿಳಿಸಿದ್ದಾರೆ.