ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಶ್ರಾವಣ ವಿಶೇಷ ಪೂಜಾ ಕಾರ್ಯಕ್ರಮ

Rashmi Kasaragodu
Updated On : 8 Aug 2013, 12:43 pm

ಚಿಂತಾಮಣಿ: ತಾಲೂಕಿನ ಶ್ರೀಕ್ಷೇತ್ರ ಕೋನಕುಂಟ್ಲು ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಶುಭ ಶ್ರಾವಣ ಶನಿವಾರದ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಈ ಕಾರ್ಯಕ್ರಮಕ್ಕೆ ಭಕ್ತಾಧಿಗಳು ಹಾಗೂ ಸಾರ್ವಜನಿಕರು ಧಾರ್ಮಿಕ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಕೃಷ್ಣಪ್ಪ ನೇಮಕ
ಮಾಲೂರು:  ಇಲ್ಲಿನ ತಾಲೂಕು ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರನ್ನು ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಆರ್‌ಡಿಪಿಆರ್ ಆ್ಯಕ್ಟ್ ಅನ್ವಯ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಅವರನ್ನು ಮುಂದಿನ ಅಧ್ಯಕ್ಷರ ಚುನಾವಣೆವರೆಗೆ ಅಧ್ಯಕ್ಷರಾಗಿ ನೇಮಿಸಲಾಗಿದೆ ಎಂದು ತಾ.ಪಂ. ಲೆಕ್ಕಾಧಿಕಾರಿ ಲೋಕಪಾಲ್ ತಿಳಿಸಿದ್ದಾರೆ. ಹಂಗಾಮಿ ಅಧ್ಯಕ್ಷ ಕೃಷ್ಣಪ್ಪ ಅವರನ್ನು ತಾ.ಪಂ. ಸದಸ್ಯರು ಹಾಗೂ ಬಿಜೆಪಿ ಮುಖಂಡರು ಸ್ಥಳದಲ್ಲಿ ಹಾಜರಿದ್ದು,ಅಭಿನಂದಿಸಿದರು.
'ಕ್ಷೀರಭಾಗ್ಯ'ಕ್ಕೆ ಚಾಲನೆ
ಮಾಲೂರು:  ಪ್ರಾಥಮಿಕ ಹಂತದ ಮಕ್ಕಳಿಗೆ ಹಾಲು ವಿತರಿಸುವ ಸರ್ಕಾರದ ಯೋಜನೆ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಯಾಗಿದೆ ಎಂದು ಶಾಲಾ ಸಮಿತಿ ಅಧ್ಯಕ್ಷ ಆಶೋಕ್ ಹೇಳಿದರು. ಗ್ರಾಮ ಪಂಚಾಯಿತಿ ಸದಸ್ಯ ರಮೇಶ್, ವಾಸುದೇವ, ಹಿರಿಯ ಮುಖಂಡ ಅರಸಪ್ಪ, ಮುಖ್ಯೋಪಾಧ್ಯಾಯ ನಿರ್ಮಲಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement