ಕೆಜಿಎಫ್ನಲ್ಲಿ ರಂಜಾನ್ ಆಚರಣೆ
ಕೆಜಿಎಫ್: ರಂಜಾನ್ ಹಬ್ಬದ ಪ್ರಯುಕ್ತ ಕೆಜಿಎಫ್ ನಗರದ ಸಾವಿರಾರು ಮುಸ್ಲಿಂ ಬಾಂಧವರು ಬೆಳಗ್ಗೆ 10 ಗಂಟೆಗೆ ನಗರದ ಪ್ರಮುಖ ಪ್ರಾರ್ಥನಾ ಮಂದಿರದಿಂದ ಮೆರವಣಿಗೆ ಹೊರಟು ಅಶೋಕನಗರದ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಪರಸ್ಪರ ಆಲಂಗಿಸಿಕೊಂಡು ರಂಜಾನ್ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಈ ವೇಳೆ ನಗರದ ವಿವಿಧ ಪಕ್ಷಗಳು ಮತ್ತು ಸಂಘ ಸಂಸ್ಥೆಗಳ ಮುಖಂಡರು ಮಾಜಿ ಶಾಸಕರು ಈದ್ಗಾ ಮೈದಾನಕ್ಕೆ ಆಗಮಿಸಿ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳನ್ನು ಕೋರಿದರು.