ಬಸ್ ಡಿಕ್ಕಿ: ಬೈಕ್ ಸವಾರ ಸಾವು
ಕೋಲಾರ: ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಒಬ್ಬ ಸ್ಥಳದಲ್ಲೇ ಮೃತಪಟ್ಟು ಮತ್ತೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಶೆಟ್ಟಿಮಾದಮಂಗಲ ಗ್ರಾಮದ ಬಳಿ ಶುಕ್ರವಾರ ಸಂಜೆ ನಡೆದಿದೆ. ಮೃತನನ್ನು ಕೋಲಾರ ನಗರದ ಕ್ಲಾರ್ಕ್ ಟವರ್ ನಿವಾಸಿ ಮನ್ಸೂರ್ (30) ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಮುಜಿರ್ ತೀವ್ರ ಗಾಯಗೊಂಡಿದ್ದಾರೆ. ಆರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.