ಬೀದಿನಾಯಿ ಹಾವಳಿ ತಪ್ಪಿಸಲು ಒತ್ತಾಯ
ಶ್ರೀನಿವಾಸಪುರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಬೀದಿ ನಾಯಿಗಳ ಹಾವಳಿಯಿಂದ ಪಟ್ಟಣದ ನಾಗರಿಕರು ತತ್ತರಿಸಿ ಹೋಗಿದ್ದಾರೆ. ವಿವಿಧ ಬಡಾವಣೆಗಳಲ್ಲಿ ಬೀದಿ ನಾಯಿಗಳ ಗುಂಪು ಗುಂಪುಗಳಾಗಿ ಓಡಾಡುತ್ತಾ ಕುರಿ, ಮೇಕೆ, ಕೋಳಿಗಳನ್ನು ಕಂಡ ತಕ್ಷಣ ಅವುಗಳ ಮೇಲೆ ಏಕಾಏಕಿ ಎಗರಿ ಬಿದ್ದು ಗಾಯಗೊಳಿಸುತ್ತಿವೆ. ಬೇಟಿಯಾಡಿ ತಿನ್ನುತ್ತಿವೆ. ಈ ನಾಯಿಗಳ ವಿರುದ್ಧ ತಿರುಗಿಬೀಳುವ ಸಾರ್ವಜನಿಕರ ಮೇಲೆ ಇನ್ನಿಲ್ಲದಂತೆ ದಾಳಿ ಮಾಡುತ್ತವೆ. ಬೀದಿ ನಾಯಿಗಳ ಹಾವಳಿ ಬಗ್ಗೆ ಸಂಬಂಧಪಟ್ಟ ಪುರಸಭೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಅರ್ಪಿಸಿದರೂ, ಗಮನ ಹರಿಸುತ್ತಿಲ್ಲ. ಅಧಿಕಾರಿಗಳು ಹೀಗೆ ನಿರ್ಲಕ್ಷ್ಯ ಮುಂದುವರಿಸಿದೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ನಾಗರಿಕರು ಎಚ್ಚರಿಸಿದ್ದಾರೆ.