ಅಕ್ರಮ ಮದ್ಯ ಮಾರಾಟ: ಬಂಧನ
ಶಿಡ್ಲಘಟ್ಟ: ಅಬ್ಲೂಡಿನಲ್ಲಿ ಮದ್ಯ, ಪೆಟ್ರೋಲ್ ಹಾಗೂ ಡೀಸೆಲ್ ಅಕ್ರಮ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಗರಾಜ್ ಬಂಧಿತ ವ್ಯಕ್ತಿ. 6 ಬಾಕ್ಸ್ ವೈನ್, 60 ಲೀ. ಪೆಟ್ರೋಲ್, 60 ಲೀ. ಡೀಸೆಲ್ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಮದ್ಯ ಪೆಟ್ರೋಲ್, ಡೀಸೆಲ್ ಸುಮಾರು 22,500 ಬೆಲೆ ಬಾಳಬಹುದು ಎಂದು ಅಂದಾಜಿಸಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ನಾಗರಾಜ್ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.