ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕೋಲಾರ

ಕೆಜಿಎಫ್ ಆಸ್ಪತ್ರೆಗೆವೈದ್ಯರ ನೇಮಕಕ್ಕೆ ಆಗ್ರಹಿಸಿ ಇಂದು ಧರಣಿ

Rashmi Kasaragodu
Updated On : 13 Aug 2013, 12:29 pm

ಕೆಜಿಎಫ್: ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಗತ್ಯವಿರುವ ವೈದ್ಯರನ್ನು ನೇಮಕ ಮಾಡಬೇಕು, ಮೂಲ ಸೌಲಭ್ಯಗಳನ್ನು ಒದಗಿಸಲು ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಅನಿರ್ದಿಷ್ಟ ಕಾಲ ಧರಣಿ ಸತ್ಯಾಗ್ರಹ ಹೋರಾಟವನ್ನು ಹಮ್ಮಿಕೊಂಡಿದೆ.   
ಕೆಜಿಎಫ್ ಕ್ಷೇತ್ರದ ಲಕ್ಷಾಂತರ ಜನರು ವಿವಿಧ ಖಾಯಿಲೆಗಳಿಂದ ನಗರದ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ವೈದ್ಯರಿಲ್ಲ, ಮೂಲ ಸೌಕರ್ಯವಿಲ್ಲ,  ದಲ್ಲಾಳಿಗಳ ಹಾವಳಿ ಮುಂತಾದ ಸಮಸ್ಯೆಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈಡೇರಿಸಬೇಕು ಎಂದು ಡಿಎಸ್‌ಎಸ್  ಸಂಘದ ಮುಖಂಡರು ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement