ನಾಳೆ ಕಾನೂನು ಸಾಕ್ಷರತಾ ರಥ ಉದ್ಘಾಟನೆ
ಚಿಕ್ಕಬಳ್ಳಾಪುರ: ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಆ.14 ರಂದು ಬೆಳಗ್ಗೆ 9.30 ಕ್ಕೆ ಕಾನೂನು ಸಾಕ್ಷರತಾ ರಥ, ಸಂಚಾರಿ ಜನತಾ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮ ಮತ್ತು ಸಾಕ್ಷರತಾ ರಥದ ಜಿಲ್ಲಾ ಪ್ರವಾಸದ ಉದ್ಘಾಟನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆಯ ಆಯೋಜಿಸಿರುವ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ಜನತಾ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮ, ಸಾಕ್ಷರತಾ ರಥದ ಜಿಲ್ಲಾ ಪ್ರವಾಸದ ಉದ್ಘಾಟನೆಯನ್ನು ಜಿಲಾಧಿಕಾರಿ ಡಾ.ಆರ್. ವಿಶಾಲ್ ನೆರವೇರಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಸ್.ವೈ.ಈರಣ್ಣವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ಪಿ ಎನ್. ಶಿವಪ್ರಸಾದ್ ಸಂಚಾರಿ ಜನತಾ ನ್ಯಾಯಾಲಯ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷ ತಮ್ಮೇಗೌಡ, ಜಿಪಂ ಕಾರ್ಯನಿರ್ವಹಣಾಧಿಕಾರಿ ನೀಲಾ ಮಂಜುನಾಥ, ಡಿಡಿಪಿಯು ಅಜಿತ್ ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುರೇಖಾ, ಜಿಲ್ಲಾ ಸರ್ಕಾರಿ ವಕೀಲ ಜಿ.ಆರ್.ಹರಿಕುಮಾರ್ ಭಾಗವಹಿಸಲಿದ್ದಾರೆ. ಮಹಿಳೆಯರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಮತ್ತು ಜನತಾ ನ್ಯಾಯಾಲಯ ಕಾರ್ಯಕ್ರಮ 14ರ ಮಧ್ಯಾಹ್ನ 2 ಗಂಟೆಗೆ ತಾಲೂಕಿನ ದಿನ್ನೆಹೊಸಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಸ್.ವೈ.ಈರಣ್ಣವರ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ವಕೀಲರ ಸಂಘದ ಅಧ್ಯಕ್ಷತಮ್ಮೇಗೌಡ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಮರಾಜ್ ಅರಸ್, ವಕೀಲರಾದ ನಾಗರಾಜು, ಮಂಜುನಾಥ, ಡಿ.ಎನ್. ಮುಕುಂದ, ಮುನಿರಾಜು ಭಾಗವಹಿಸುವರು. ವಕೀಲ ಬಿ.ವಿನೋದ್‌ಕುಮಾರ್ ಕೌಟುಂಬಿಕ ದೌರ್ಜನ್ಯ ಕಾಯ್ದೆ ಎಂಬ ವಿಷಯ ಕುರಿತು ಉಪನ್ಯಾಸ ನೀಡುವರು. ಗ್ರಾಮಸ್ಥರಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ ಮತ್ತು ಜನತಾ ನ್ಯಾಯಾಲಯ ಕಾರ್ಯಕ್ರಮ 14ರ ಂ.5 ಗಂಟೆಗೆ ತಾಲೂಕಿನ ಜಾತವಾರದ ಪ್ರಸನ್ನ ಗೋಪಾಲಸ್ವಾಮಿ ದೇವಸ್ಥಾನದಲ್ಲಿ ನಡೆಯಲಿದೆ. ವಕೀಲ ಡಿ.ವಿ. ಮಂಜುನಾಥ್ ಭೂ ಕಂದಾಯ ಕಾಯ್ದೆ ವಿಷಯ ಕುರಿತು ಉಪನ್ಯಾಸ ನೀಡುವರು, ವಕೀಲ ಸುಬ್ರಮಣಿ ಮತ್ತು ತಂಡದವರಿಂದ ಕಾನೂನಿನ ಕಿರುನಾಟಕ ನಡೆಯುತ್ತದೆ.